ಬೆಂಗಳೂರು:ರಾಜ್ಯ ರಾಜಧಾನಿಯಲ್ಲಿ ಇಂದು 17 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಎಲ್ಲ ಪ್ರಕರಣಗಳು ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಿಕ್ಕಿವೆ.
ಬೆಂಗಳೂರಿನಲ್ಲಿಂದು 17 ಕೊರೊನಾ ಪ್ರಕರಣ ಪತ್ತೆ: ಇಬ್ಬರು ಸಾವು - ಕೊರೊನಾ ಇತ್ತೀಚಿನ ಸುದ್ದಿ
ಬೆಂಗಳೂರಿನಲ್ಲಿಂದು 17 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಇಂದು 65 ವರ್ಷದ ಮಹಿಳೆ ಹಾಗೂ 31 ವರ್ಷದ ಪುರುಷ ಕೊರೊನಾಗೆ ಬಲಿಯಾಗಿದ್ದಾರೆ. 31 ವರ್ಷದ ವ್ಯಕ್ತಿ ಆಸ್ಪತ್ರೆಗೆ ಜೂನ್ 13 ರಂದು ದಾಖಲಾಗಿದ್ದು, ಐದು ದಿನದ ಬಳಿಕ ಇಂದು ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ ಒಟ್ಟು 844ಕ್ಕೆ ಏರಿಕೆಯಾಗಿದೆ. ಇಂದು ಹದಿನಾಲ್ಕು ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 384 ಮಂದಿ ಗುಣಮುಖರಾಗಿದ್ದಾರೆ. 408 ಸಕ್ರಿಯ ಪ್ರಕರಣಗಳಿದ್ದು, ಐಸಿಯುನಲ್ಲಿ 33 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಂಟೇನ್ಮೆಂಟ್ ಪ್ರದೇಶಗಳ ಸಂಖ್ಯೆ 231ಕ್ಕೆ ಏರಿಕೆಯಾಗಿದ್ದು, 38 ವಾರ್ಡ್ಗಳು ಕಂಟೇನ್ಮೆಂಟ್ ಝೋನ್ನಿಂದ ತೆರವಾಗಿವೆ. ನಗರದಲ್ಲಿ 2,212 ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಹಚ್ಚಿದ್ದು, ಒಟ್ಟು 869 ಮಂದಿ ಅಂದರೆ ಶೇ. 39 ರಷ್ಟು ಮಂದಿ ಕ್ವಾರಂಟೈನ್ನಲ್ಲಿದ್ದಾರೆ. ಶೇ.61 ಅಂದರೆ 1343 ದ್ವಿತೀಯ ಸಂಪರ್ಕಿತರು ಕ್ವಾರಂಟೈನ್ನಲ್ಲಿದ್ದಾರೆ.