ಬೆಂಗಳೂರು: ನಗರದಲ್ಲಿ 1,714 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 34,943ಕ್ಕೆ ಏರಿಕೆಯಾಗಿದ್ದು, 26,746 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 1,714 ಕೋವಿಡ್ ಪಾಸಿಟಿವ್ ಕೇಸ್: 520 ಮಂದಿ ಡಿಸ್ಚಾರ್ಜ್ - bengaluru corona update
ಬೆಂಗಳೂರು ನಗರದಲ್ಲಿ ಒಂದೇ ದಿನ 1714 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 22 ಮಂದಿ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವ್
ಇಂದು 22 ಮಂದಿ ಮೃತಪಟ್ಟಿರುವುದು ವರದಿಯಾಗಿದ್ದು, ಈವರೆಗೆ ಬೆಂಗಳೂರೊಂದರಲ್ಲೇ 720 ಮಂದಿಯನ್ನು ಕೋವಿಡ್ ಬಲಿ ತೆಗೆದುಕೊಂಡಿದೆ.
ಅಷ್ಟೇ ಅಲ್ಲದೆ, ಅತಿಹೆಚ್ಚು ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 520 ಮಂದಿ ಅಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ 7,476 ಮಂದಿ ಬಿಡುಗಡೆಯಾಗಿದ್ದಾರೆ. ನಗರದ ಕಂಟೇನ್ಮೆಂಟ್ ಪ್ರದೇಶಗಳ ಸಂಖ್ಯೆ 9,797ಕ್ಕೆ ಏರಿಕೆಯಾಗಿದೆ.