ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿಂದು 1,736 ಮಂದಿಯಲ್ಲಿ ಕೋವಿಡ್​ ದೃಢ: ಸಾವಿನ ಸಂಖ್ಯೆ ಶೂನ್ಯ - Etv bharat kannada

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 1,736 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. 1,699 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇಂದು ಸೋಂಕಿಗೆ ಯಾರೂ ಕೂಡ ಬಲಿಯಾಗಿಲ್ಲ.

Covid in the state
Covid in the state

By

Published : Aug 2, 2022, 8:26 PM IST

ಬೆಂಗಳೂರು:ರಾಜ್ಯದಲ್ಲಿಂದು 25,753 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1,736 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇಂದು 1,699 ಮಂದಿ ಡಿಸ್ಚಾರ್ಜ್ ಆಗಿದ್ದು, ಒಟ್ಟು 39,59,342 ಮಂದಿ ಗುಣಮುಖರಾಗಿದ್ದಾರೆ. ಇಂದು ಕೋವಿಡ್ ಸಾವಿನ ಸಂಖ್ಯೆ ಶೂನ್ಯವಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 10,896ಕ್ಕೆ ಏರಿಕೆಯಾಗಿದೆ.

ಈ ಮೂಲಕ ಸೋಂಕಿತರ ಪ್ರಮಾಣ ಶೇ.6.74 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ. 6.01 ರಷ್ಟಿದೆ. ಇಲ್ಲಿಯವರೆಗೂ ಪರೀಕ್ಷಿಸಲಾದ ಒಟ್ಟು ಸಂಖ್ಯೆ 6,78,45,629. ವಾರದ ಸಾವಿನ ಪ್ರಮಾಣ ಶೇ.0.10 ರಷ್ಟಿದೆ. ವಿಮಾನ ನಿಲ್ದಾಣದಿಂದ ಇಂದು ತಪಾಸಣೆಗೆ 4,675 ಒಳಗಾಗಿದ್ದು, ಇದುವರೆಗೂ 13,12,168 ಪ್ರಯಾಣಿಕರು ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ.

ಇದನ್ನೂ ಓದಿ:ಮಹಿಳಾ ವಾಣಿಜ್ಯೋದ್ಯಮ ಪ್ರಗತಿಗೆ ರಾಜ್ಯ ಸರ್ಕಾರದಿಂದ ಅಗತ್ಯ ಸಹಕಾರ: ಸಿಎಂ ಬೊಮ್ಮಾಯಿ

ಬೆಂಗಳೂರಿನಲ್ಲಿ ಇಂದು 1,274 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 18,38,334 ಕ್ಕೆ ಏರಿಕೆ ಆಗಿದೆ. ಇಂದು 1,303 ಮಂದಿ ಬಿಡುಗಡೆಯಾಗಿದ್ದು, ಇದುವರೆಗೂ 18,13,063 ಮಂದಿ ಬಿಡುಗಡೆ ಆಗಿದ್ದಾರೆ. ಬೆಂಗಳೂರಿನಲ್ಲಿ ಕೋವಿಡ್ ಸಾವಿನ ಸಂಖ್ಯೆ ಶೂನ್ಯ. ಸಕ್ರಿಯ ಪ್ರಕರಣಗಳ ಸಂಖ್ಯೆ 8,296 ಇದೆ. ಇದುವರೆಗೂ ಕೋವಿಡ್ ಸಾವಿನ ಸಂಖ್ಯೆ 16,974 ರಷ್ಟಿದೆ.

ABOUT THE AUTHOR

...view details