ಬೆಂಗಳೂರು:ರಾಜ್ಯದಲ್ಲಿಂದು 1,67,237 ಜನರಿಗೆ ಕೊರೊನಾ ತಪಾಸಣೆ ನಡೆಸಲಾಗಿದೆ. ಇದರಲ್ಲಿ 1826 ಮಂದಿಗೆ ವೈರಸ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,22,875 ಕ್ಕೆ ಏರಿಕೆ ಕಂಡಿದೆ. ಪಾಸಿಟಿವಿಟಿ ದರ ಶೇ1.09 ರಷ್ಟಿದೆ. ಇನ್ನು 1618 ಸೋಂಕಿತರು ಗುಣಮುಖರಾಗಿದ್ದು, ಈ ತನಕ 28,63,117 ಜನರು ಡಿಸ್ಚಾರ್ಜ್ ಆಗಿದ್ದಾರೆ.
ಇತ್ತ ಸಕ್ರಿಯ ಪ್ರಕರಣಗಳು 22,851 ರಷ್ಟು ಇದೆ. 33 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 36,881ಕ್ಕೆ ಏರಿದೆ. ಸಾವಿನ ಪ್ರಮಾಣ ಶೇ1.80 ರಷ್ಟಿದೆ. ವಿಮಾನ ನಿಲ್ದಾಣದಿಂದ 894 ಜನರು ಆಗಮಿಸಿದ್ದು, ಕೊರೊನಾ ತಪಾಸಣೆಗೆ ಒಳಪಟ್ಟಿದ್ದಾರೆ. ಯುಕೆಯಿಂದ 279 ಪ್ರಯಾಣಿಕರು ಆಗಮಿಸಿದ್ದಾರೆ.
ರೂಪಾಂತರಿ ಅಪ್ಡೇಟ್ಸ್
1) ಡೆಲ್ಟಾ ( Delta/B.617.2) -1089
2) ಅಲ್ಪಾ(Alpha/B.1.1.7) - 155
3) ಕಪ್ಪಾ (Kappa/B.1.617) 159
4) ಬೇಟಾ ವೈರಸ್ (BETA/B.1.351) -7
5) ಡೆಲ್ಟಾ ಪ್ಲಸ್(Delta plus/B.1.617.2.1(AY.1) -4 ಮಂದಿ
6) ಈಟಾ (ETA/B.1.525) - 1