ಬೆಂಗಳೂರು:ರಾಜ್ಯದಲ್ಲಿ ಇಂದು 1,869 ಮಂದಿಗೆ ಹೊಸದಾಗಿ ಕೋವಿಡ್-19 ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 28,82,239 ಕ್ಕೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.1.30ರಷ್ಟಿದೆ.
ಇನ್ನು, 3,144 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಹೊಸ ಪ್ರಕರಣಗಳಿಗೆ ಹೋಲಿಕೆ ಮಾಡಿದ್ರೆ, ಸೋಂಕಿತರ ಸಂಖ್ಯೆ ಕಡಿಮೆ ಇದೆ. ಈತನಕ 28,16,013 ಜನರು ರಾಜ್ಯದ ವಿವಿಧ ಆಸ್ಪತ್ರೆಗಳಿಂದ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ.