ಬೆಂಗಳೂರು:ರಾಜ್ಯದಲ್ಲಿಂದು 11,830 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 191 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,48,283ಕ್ಕೆ ಏರಿಕೆ ಆಗಿದೆ. ಪಾಸಿಟಿವ್ ದರವೂ ಶೇ 1.61ಕ್ಕೆ ಏರಿಕೆ ಕಂಡಿದೆ.
ಇತ್ತ 138 ಸೋಂಕಿತರು ಗುಣಮುಖರಾಗಿದ್ದು, ಈ ತನಕ 39,06,327 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಯಾವುದೇ ಸಾವಿನ ವರದಿಯಾಗಿಲ್ಲ, ಸಾವಿನ ಸಂಖ್ಯೆ 40,060ರಷ್ಟಿದ್ದು, ಡೆತ್ ರೇಟ್ 0.36 ರಷ್ಟಿದೆ. ಸದ್ಯ ಸಕ್ರಿಯ ಪ್ರಕರಣಗಳು 1854 ರಷ್ಟಿದೆ. ವಿಮಾನ ನಿಲ್ದಾಣದಿಂದ 3,644 ಪ್ರಯಾಣಿಕರು ತಪಾಸಣೆಗೆ ಒಳಪಟ್ಟಿದ್ದಾರೆ.