ಬೆಂಗಳೂರು: ನಗರದಲ್ಲಿ ಇಂದು 1,918 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,09,793ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿಂದು 1,918 ಕೊರೊನಾ ಪ್ರಕರಣ ಪತ್ತೆ: 26 ಮಂದಿ ಬಲಿ - corona news
ಸಿಲಿಕಾನ್ ಸಿಟಿಯಲ್ಲಿ ಇಂದು 1918 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, 26 ಜನ ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 327 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಿಬಿಎಂಪಿ
ಇಂದು 2,034 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 73,363 ಮಂದಿ ಚೇತರಿಸಿಕೊಂಡಿದ್ದಾರೆ. ಒಟ್ಟು 34,735 ಸಕ್ರಿಯ ಪ್ರಕರಣಗಳಿವೆ.
ಇಂದು 26 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈವರೆಗೆ 1,694 ಮಂದಿ ಮೃತಪಟ್ಟಿದ್ದಾರೆ. ಒಟ್ಟು 327 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.