ಬೆಂಗಳೂರು: ರಾಜ್ಯದಲ್ಲಿ ಇಂದು 1,990 ಮಂದಿಗೆ ಹೊಸದಾಗಿ ಕೋವಿಡ್-19 ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 28,76,587ಕ್ಕೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.1.59ರಷ್ಟಿದೆ.
ಇನ್ನು, 2,537 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಹೊಸ ಪ್ರಕರಣಗಳಿಗೆ ಹೋಲಿಕೆ ಮಾಡಿದ್ರೆ, ಸೋಂಕಿತರ ಸಂಖ್ಯೆ ಕಡಿಮೆ ಇದೆ. ಈತನಕ 28,06,933 ಜನರು ರಾಜ್ಯದ ವಿವಿಧ ಆಸ್ಪತ್ರೆಗಳಿಂದ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ.
ಸದ್ಯ 33,642 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರೆದಿದೆ. ಮಾರಕ ರೋಗಕ್ಕೆ ಇಂದು 45 ಸೋಂಕಿತರು ಮೃತಪಟ್ಟಿದ್ದಾರೆ. ಇಲ್ಲಿಯವರೆಗಿನ ಸಾವಿನ ಸಂಖ್ಯೆ 35,989 ತಲುಪಿದೆ. ಸಾವಿನ ಶೇಕಡಾವಾರು ಪ್ರಮಾಣ ಮತ್ತೆ ಶೇ.2.26ರಷ್ಟಿದೆ. ಯುಕೆಯಿಂದ ಮೂವರು ಅಂತಾರಾಷ್ಟ್ರೀಯ ಪ್ರಯಾಣಿಕರು ರಾಜ್ಯಕ್ಕೆ ಆಗಮಿಸಿದ್ದಾರೆ.