ಬೆಂಗಳೂರು :1998ನೇ ಸಾಲಿನ ಕೆಎಎಸ್ ಅಧಿಕಾರಿಗಳ ನೇಮಕಾತಿ ವಿಚಾರವಾಗಿ ನ್ಯಾಯಾಲಯ ನೀಡಿದ್ದ ಆದೇಶ ಪಾಲನೆ ಮಾಡಿಲ್ಲ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ಕರ್ನಾಟಕ ಲೋಕಸೇವಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.
ಚನ್ನಪ್ಪ ಮತ್ತಿತರೆ ಅಭ್ಯರ್ಥಿಗಳು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ, ಅರ್ಜಿದಾರರ ವಾದ ಆಲಿಸಿದ ಬಳಿಕ ಕೆಪಿಎಸ್ಸಿ ನ್ಯಾಯಾಂಗ ನಿಂದನೆ ಎಸಗಿರುವುದು ಮೇಲ್ನೋಟಕ್ಕೆ ದೃಢಪಟ್ಟಿದೆ ಎಂದು ಅಭಿಪ್ರಾಯಪಟ್ಟಿತು. ಅಲ್ಲದೆ, ಕೆಪಿಎಸ್ಸಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಡಿಸೆಂಬರ್ 1ಕ್ಕೆ ಮುಂದೂಡಿತು.