ಬೆಂಗಳೂರು: ಇಂದು ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಹಗುರವಾಗಿ ಮಳೆಯಾಗಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ರಾಜ್ಯದಲ್ಲಿ ಇನ್ನೆರಡು ದಿನ ಹಗುರ ಮಳೆ ಸಾಧ್ಯತೆ - rain in bengaluru
ಕರಾವಳಿಯ ಬಹುತೇಕ ಕಡೆ ಸಾಧಾರಣ ಮಳೆಯಾಗಿದ್ದು, ಇಂದು ಮತ್ತು ನಾಳೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಸಿದ್ಧಾಪುರದಲ್ಲಿ 13.6 ಮಿಮೀ ಯಾದಗಿರಿಯ ಕೆಂಬಾವಿಯಲ್ಲಿ 18.8 ಮಿಮೀ ಆಗುಂಬೆಯಲ್ಲಿ 10 ಮಿಮೀ ಮಳೆಯಾಗಿದೆ. ಕರ್ನಾಟಕ ರಾಜ್ಯಾದ್ಯಂತ 26 ರಿಂದ 28 ರವರೆಗೆ ಹಗುರವಾದ ಸಾಧಾರಣ ಮಳೆ ಕೆಲವು ಕಡೆ ಬರಬಹುದು. ಆಗಸ್ಟ್ 29 ರಂದು ಹಲವು ಕಡೆ ಮಳೆಯಾಗಬಹುದು. ಆಗಸ್ಟ್ 30 ರಂದು ರಾಜ್ಯದ ಬಹುತೇಕ ಎಲ್ಲಾ ಕಡೆ ಮಳೆಯಾಗಬಹುದು. ಅದೇ ರೀತಿ ಆಗಸ್ಟ್ 26, 27 ರಂದು ಬೆಂಗಳೂರಿನ ಕೆಲವು ಕಡೆ ಮಾತ್ರ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿ ಸಿ.ಎಸ್. ಪಾಟೀಲ ತಿಳಿಸಿದರು.
ಇಂದು ಮತ್ತು ನಾಳೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗುವುದಿಲ್ಲ ಎಂದು ಹವಾಮಾನ ವರದಿ ತಿಳಿಸಿದೆ.