ಬೆಂಗಳೂರು: ಪೀಪಲ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ)ಯ ಮಾಜಿ ಅಧ್ಯಕ್ಷ ಹಾಗೂ 2008ರಲ್ಲಿ ಬೆಂಗಳೂರಿನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಅಬ್ದುಲ್ ನಾಸೀರ್ ಮದನಿ ತಂದೆಯ ಅನಾರೋಗ್ಯ ನಿಮಿತ್ತ ಕೇರಳಕ್ಕೆ ತೆರಳಿದ್ದಾನೆ. ಇಂದು ಸಂಜೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೊಚ್ಚಿನ್‌ಗೆ ಪೊಲೀಸ್ ಬಂದೋಬಸ್ತ್‌ನೊಂದಿಗೆ ಪ್ರಯಾಣಿಸಿದ್ದಾನೆ.
ಸುಪ್ರೀಂಕೋರ್ಟ್‌ನಿಂದ ಅನುಮತಿ ಪಡೆದು ಮದನಿ 12 ಕಾಲ ಕೇರಳದಲ್ಲಿ ವಾಸ್ತವ್ಯ ಹೂಡಲಿದ್ದು, ಜುಲೈ 7ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾನೆ. ತಂದೆಯ ಅನಾರೋಗ್ಯ ಹಿನ್ನೆಲೆಯಲ್ಲಿ ಕೇರಳಕ್ಕೆ ತೆರಳಲು ಅನುಮತಿ ಕೋರಿ ಸುಪ್ರೀಂಕೋರ್ಟ್‌ಗೆ ಮದನಿ ಅರ್ಜಿ ಸಲ್ಲಿಸಿದ್ದ. ಈ ಸಂಬಂಧ ಮದನಿ ಅರ್ಜಿಯನ್ನು ಪುರಸ್ಕರಿಸಿ ನ್ಯಾಯಾಲಯವು ಕೇರಳಕ್ಕೆ ತೆರಳಲು ಅನುಮತಿ ನೀಡಿತ್ತು. ಹೀಗಾಗಿ ಓರ್ವ ಆರ್ಎಸ್ಐ, ಮೂವರು ಕಾನ್‌ಸ್ಟೇಬಲ್‌ಗಳು ಹಾಗೂ ಓರ್ವ ಚಾಲಕನನ್ನು ನಿಯೋಜಿಸಲಾಗಿದೆ. 12 ದಿನಗಳ ಸಿಬ್ಬಂದಿ ಖರ್ಚು-ವೆಚ್ಚ ಹಾಗೂ ಸೇವಾ ಶುಲ್ಕ 6,76,101 ರೂಪಾಯಿಯನ್ನು ಕರ್ನಾಟಕಕ್ಕೆ ಸರ್ಕಾರಕ್ಕೆ ಮುಂಗಡವಾಗಿ ಪಾವತಿಸಿದ್ದಾನೆ ಎಂದು ಹೇಳಲಾಗಿದೆ.
2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟದ ಆರೋಪಿ ಜಾಮೀನಿನ ಮೇರೆಗೆ ಹೊರಗಿರುವ ಮದನಿ ಜಾಮೀನಿನ ಷರತ್ತು ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲೇ ವಾಸ್ತವ್ಯ ಹೂಡಿದ್ದಾನೆ. ತಂದೆಯ ಅನಾರೋಗ್ಯ ಹಿನ್ನೆಲೆ ಕರ್ನಾಟಕ ಪೊಲೀಸರು ವಿಧಿಸಿರುವ ಭದ್ರತಾ ರಕ್ಷಣೆ ಹಣ ಕಡಿಮೆ ಮಾಡುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಹಾಕಿದ್ದ. ಆದರೆ ಕೋರ್ಟ್ ಅರ್ಜಿ ನಿರಾಕರಿಸಿತ್ತು.