ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಇಂದು ಒಂದೇ ದಿನದಲ್ಲಿ 24 ಹೊಸ ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 589ಕ್ಕೆ ಏರಿಕೆಯಾಗಿದೆ.
ಇಂದು 24 ಸೋಂಕಿತರು ಪತ್ತೆ, 589ಕ್ಕೆ ಸೋಂಕಿತರ ಸಂಖ್ಯೆ ಏರಿಕೆ - ಹೊಸ ಪ್ರಕರಣಗಳು
ರಾಜ್ಯದಲ್ಲಿ ಕೊರೊನಾ ಹಾವಳಿ ತೀವ್ರವಾಗಿದ್ದು, ಇಂದು 24 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 589ಕ್ಕೆ ಏರಿಕೆಯಾಗಿದೆ.
ಕೊರೊನಾ
ಒಟ್ಟು ಸೋಂಕಿತರಲ್ಲಿ 22 ಮಂದಿ ಸಾವನ್ನಪ್ಪಿದ್ದು, ಇದರಲ್ಲಿ ಕೊರೊನಾ ಹೊರತಾದ ಕಾರಣದಿಂದ ಒಬ್ಬ ಮೃತಪಟ್ಟಿದ್ದಾನೆ. ಇದರ ಜೊತೆಗೆ 22 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗಿದ್ದು, ಉಳಿದ 315 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ಇದರಲ್ಲಿ 9 ಮಂದಿಯನ್ನು ಐಸಿಯುನಲ್ಲಿ ಇಡಲಾಗಿದೆ.
ಬೆಂಗಳೂರಿನಲ್ಲಿ ಇಂದು ಯಾವುದೇ ಸೋಂಕಿತ ವ್ಯಕ್ತಿ ಪತ್ತೆಯಾಗಿಲ್ಲ. ನಗರದಲ್ಲಿ ಈವರೆಗೂ 141 ಸೋಂಕಿತರಿದ್ದು ಅದರಲ್ಲಿ 69 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. 66 ಮಂದಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.