ಕರ್ನಾಟಕ

karnataka

ETV Bharat / state

Indira Canteen: ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟೀನ್ ಪ್ರಾರಂಭ - ಸಿಎಂ ಸಿದ್ದರಾಮಯ್ಯ - etv bharat kannada

ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ.70 ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ. 30 ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Etv Bharatinauguration-of-250-indira-canteens-in-bangalore-city-says-cm-siddaramaiah
Indira Canteen: ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟೀನ್ ಪ್ರಾರಂಭ - ಸಿಎಂ ಸಿದ್ದರಾಮಯ್ಯ

By

Published : Jun 12, 2023, 7:02 PM IST

ಬೆಂಗಳೂರು: ನಗರದ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ಗಳ ಪುನಾರಂಭಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದ್ದು, ಇಲ್ಲಿವರೆಗೂ ಇಂದಿರಾ ಕ್ಯಾಂಟೀನ್​ಗೆ ಬಿಬಿಎಂಪಿ ವತಿಯಿಂದ 70%, ಹಾಗೂ ಸರ್ಕಾರದಿಂದ ಶೇ.30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯು ಶೇ. 50 ರಷ್ಟು ಹಾಗೂ ಸರ್ಕಾರ ಶೇ. 50 ರಷ್ಟು ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ ಎಂದರು.

ಬೆಂಗಳೂರು ಹೊರತುಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ.70 ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ. 30 ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ. ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಇಂದಿರಾ ಕ್ಯಾಂಟೀನ್ ಆಹಾರ ಕ್ರಮದಲ್ಲಿ ಬದಲಾವಣೆ, ಇಂದಿರಾ ಕ್ಯಾಂಟೀನ್​ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು, ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ದರ ಪರಿಷ್ಕರಣೆ ಇಲ್ಲ. ವಲಯವಾರು ಕರೆಯಲಾಗುವ ಟೆಂಡರ್ ಪ್ರಕ್ರಿಯೆ ನಂತರ ಇಂದಿರಾ ಕ್ಯಾಂಟೀನ್ ಯೋಜನೆಗೆ ಪುನಃ ಚಾಲನೆ ನೀಡಲಾಗುವುದು ಎಂದು ಎಂದು ಸಿಎಂ ತಿಳಿಸಿದರು.

ತಪ್ಪಿತಸ್ಥರ ವಿರುದ್ಧ ತನಿಖೆ:ಕಲುಷಿತ ನೀರಿನ ಸೇವನೆಯಿಂದ ಕೊಪ್ಪಳದಲ್ಲಿ ಇಬ್ಬರು ಹಾಗೂ ರಾಯಚೂರಿನಲ್ಲಿ ಒಬ್ಬರು ಮೃತಪಟ್ಟಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ತನಿಖೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:CM Siddaramaiah warns: ಕಲುಷಿತ ನೀರು ಸೇವಿಸಿ ಸಾವು: ಪ್ರಕರಣ ಮರುಕಳಿಸಿದರೆ ಜಿ.ಪಂ ಸಿಇಒ ಹೊಣೆ ಮಾಡಿ ಅಮಾನತ್ತಿಗೆ ಸೂಚಿಸಿ: ಸಿಎಂ ಎಚ್ಚರಿಕೆ

ಇಂದಿರಾ ಕ್ಯಾಂಟೀನ್ ಹಿನ್ನೆಲೆ: ರಾಜ್ಯದಲ್ಲಿ 2013 ರಿಂದ 18ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭ ನಗರದ ಎಲ್ಲಾ 198 ವಾರ್ಡ್ ಗಳಿಗೂ ಇಂದಿರಾ ಕ್ಯಾಂಟೀನ್ ನಿರ್ಮಿಸುವ ಗುರಿ ಹೊಂದಲಾಗಿತ್ತು. ಆದರೆ ಇದು ಪೂರ್ಣಗೊಳ್ಳುವ ಮುನ್ನವೇ ಕಾಂಗ್ರೆಸ್ ಸರ್ಕಾರ ಪತನಗೊಂಡು ಬಹುಮತದ ಸರ್ಕಾರ ಬರದ ಹಿನ್ನೆಲೆ 2018 ರಲ್ಲಿ ಜೆಡಿಎಸ್ ಜೊತೆ ಕೈಜೋಡಿಸಿ ಕಾಂಗ್ರೆಸ್ ಸರ್ಕಾರ ನಡೆಸಿತ್ತು. ಅಲ್ಲಿಯವರೆಗೂ ಎಲ್ಲವೂ ಸರಿಯಾಗಿತ್ತು.

ಆದರೆ ಬಿಜೆಪಿ ಸರ್ಕಾರ ರಚನೆಯಾದ ಬಳಿಕ 2019 ರಿಂದ 2023ರ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ಗಳು ಮುಚ್ಚಿದ್ದವು. ಮೊಬೈಲ್ ಕ್ಯಾಂಟೀನ್ ಗಳು ಸಹ ಸ್ಥಗಿತಗೊಂಡಿದ್ದವು. ರಾಜ್ಯದಲ್ಲಿ ತಾವು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಮುಚ್ಚಿರುವ ಇಂದಿರಾ ಕ್ಯಾಂಟೀನ್ ಗಳನ್ನು ತೆರೆಯುವ ಜೊತೆಗೆ ಇನ್ನಷ್ಟು ಕ್ಯಾಂಟೀನ್​ಗಳನ್ನು ಆರಂಭಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಅದೇ ಪ್ರಕಾರ ಆ ಕಾರ್ಯದಲ್ಲಿ ಈಗ ನಿರತವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 185 ಇಂದಿರಾ ಕ್ಯಾಂಟೀನ್‌ಗಳು ಇದ್ದು, ಬಿಜೆಪಿ ಅಧಿಕಾರದಲ್ಲಿದ್ದಾಗ 10 ಮೊಬೈಲ್ ಕ್ಯಾಂಟೀನ್‌ಗಳ ಮುಚ್ಚಿದ್ದವು. ಹಾಲಿ ಕ್ಯಾಂಟೀನ್‌ಗಳ ಪುನಾರಂಭ ಜೊತೆಗೆ 250 ವಾರ್ಡ್‌ಗಳಿಗೂ ಕ್ಯಾಂಟೀನ್ ವಿಸ್ತರಣೆಗೆ ಸಿದ್ದರಾಮಯ್ಯ ಸರ್ಕಾರ ಸಿದ್ಧತೆ ನಡೆಸಿದೆ.

ABOUT THE AUTHOR

...view details