ಬೆಂಗಳೂರು: ದೇಶದೆಲ್ಲೆಡೆ ತಲ್ಲಣ ಮೂಡಿಸಿರುವ ಮಹಾಮಾರಿ ಕೊರೊನಾ ಬೆಂಗಳೂರಿಗರ ನಿದ್ದೆಗೆಡಿಸಿದೆ. ಇಂದು ನಗರದ 2,665 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 72,237ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ಕೊರೊನಾಗೆ 18 ಮಂದಿ ಬಲಿ, 2,665 ಜನರಲ್ಲಿ ಸೋಂಕು ದೃಢ - New corona case
ರಾಜಧಾನಿಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಇಂದು 2,665 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
Bangalore corona case
18 ಮಂದಿ ಕೊನೆಯುಸಿರೆಳೆದಿದ್ದು, ಈವರೆಗೆ 1,218 ಜನರು ಮೃತಪಟ್ಟಿದ್ದಾರೆ. ಇನ್ನು, 2,229 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 72,237 ಸೋಂಕಿತರ ಪೈಕಿ 37,292 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ.
ಸದ್ಯ 33,726 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ನಡೆಯುತ್ತಿದೆ.