ಬೆಂಗಳೂರು: ರಾಜ್ಯದಲ್ಲಿಂದು 38,054 ಜನರಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಅದರಲ್ಲಿ 268 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,41,063 ಕ್ಕೆ ಏರಿಕೆ ಆಗಿದೆ. ಪಾಸಿಟಿವ್ ದರವೂ 0.70% ರಷ್ಟಿದೆ. ಇತ್ತ 1119 ಸೋಂಕಿತರು ಗುಣಮುಖರಾಗಿದ್ದು, ಈ ತನಕ 38,95,452 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 5,623 ರಷ್ಟಿದೆ. ಸೋಂಕಿಗೆ 14 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 39,950 ಏರಿಕೆ ಕಂಡಿದೆ. ಡೆತ್ ರೇಟು ಶೇ 5.22 ರಷ್ಟಿದೆ.
ವಿಮಾನ ನಿಲ್ದಾಣದಿಂದ 2322 ಪ್ರಯಾಣಿಕರು ಆಗಮಿಸಿದ್ದಾರೆ. ಇನ್ನು ಬೆಂಗಳೂರಿನಲ್ಲಿ 161 ಮಂದಿಗೆ ಸೋಂಕು ದೃಢಪಟ್ಟಿದ್ದು, 17,78,522 ಕ್ಕೆ ಏರಿಕೆ ಆಗಿದೆ. 550 ಮಂದಿ ಡಿಸ್ಜಾರ್ಜ್ ಆಗಿದ್ದು, ಈ ತನಕ 17,58,355 ಏರಿಕೆ ಕಂಡಿದೆ.
ಇದನ್ನೂ ಓದಿ:ತೆಲಂಗಾಣ ವಿಧಾನಸಭೆ, ಲೋಕಸಭೆ ಚುನಾವಣೆ ಮೇಲೆ ಕಣ್ಣು: ರಾಜಕೀಯ ಚಾಣಕ್ಯನ ಭೇಟಿ ಮಾಡಿದ ಕೆಸಿಆರ್!
10 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 16,917 ರಷ್ಟಿದೆ. ಸದ್ಯ ಸಕ್ರಿಯ ಪ್ರಕರಣಗಳು 3,249 ರಷ್ಟಿದೆ.
ರೂಪಾಂತರಿ ವೈರಸ್ ಅಪ್ಡೇಟ್ಸ್
ಅಲ್ಪಾ- 156
ಬೇಟಾ - 08