ಬೆಂಗಳೂರು:ರಾಜ್ಯದಲ್ಲಿ ಇಂದು 2,366 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 28 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ 162 ಜನರು ಗೃಹ ಆರೈಕೆಯಲ್ಲಿದ್ದು, 13 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ 6 ಜನರು ಐಸಿಯು ಹಾಗೂ 7 ಜನರು ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ನಗರದಲ್ಲಿ 68 ಜನರಲ್ಲಿ ಸೋಂಕು ಕಾಣಿಸಿಕೊಂಡರೆ, ಚಿಕ್ಕಮಗಳೂರಿನಲ್ಲಿ 4, ಶಿವಮೊಗ್ಗದಲ್ಲಿ 3, ದಕ್ಷಿಣ ಕನ್ನಡ ಮತ್ತು ರಾಮನಗರ ಜಿಲ್ಲೆಯಲ್ಲಿ ತಲಾ 2 ಹಾಗೂ ಮೈಸೂರಿನಲ್ಲಿ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ದಕ್ಷಿಣ ಕನ್ನಡದಲ್ಲಿ ಒಬ್ಬರು ಮೃತಪಟ್ಟಿದ್ದಾರೆ.
ಶಿವಮೊಗ್ಗ ವರದಿ:ಜಿಲ್ಲೆಯಲ್ಲಿ ಮೂವರಲ್ಲಿ ಕೊರೊನಾ ಪಾಸಿಟಿಟ್ ಕಂಡು ಬಂದಿದೆ. ಓರ್ವ ಮಹಿಳೆ ಸೇರಿದಂತೆ ಇಬ್ಬರು ಪುರುಷರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಮಹಿಳೆಯು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನಿಬ್ಬರು ಹೋಂ ಕ್ವಾರಟೈನ್ ಆಗಿದ್ದಾರೆ. ಮೂವರಿಗೂ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಸದ್ಯ ಯಾವುದೇ ಅಪಾಯ ಕಂಡುಬಂದಿಲ್ಲ.
ಮೂವರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿರುವ ಕುರಿತು ಸ್ಪಷ್ಟಪಡಿಸಿದ ಮೆಗ್ಗಾನ್ ಆಸ್ಪತ್ರೆಯ ಅಧೀಕ್ಷಕ ಡಾ.ತಿಮ್ಮಪ್ಪ, ಮೊನ್ನೆ ಪರೀಕ್ಷೆ ನಡೆಸಿದ ಮೂವರಲ್ಲಿ ಸಾರಿ ಪ್ರಕರಣದಂತೆ ಕಂಡುಬಂದಿತ್ತು. ನಂತರ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಿದಾಗ ಅದು ಕೋವಿಡ್ ಎಂದು ಗೊತ್ತಾಗಿದೆ. ಆದರೆ, ಯಾವುದೇ ಅಪಾಯದ ಸ್ಥಿತಿಯಲ್ಲಿ ಯಾರೂ ಇಲ್ಲ. ಎಲ್ಲರೂ ನಾರ್ಮಲ್ ಆಗಿದ್ದಾರೆ. ಆಸ್ಪತ್ರೆಯಲ್ಲಿ 30 ಆಕ್ಸಿಜನ್ ಬೆಡ್ ಸಿದ್ದಮಾಡಿದ್ದೇವೆ. 12 ಐಸಿಯು ಬೆಡ್ ಇವೆ. ಜನತೆ ಆತಂಕಕ್ಕೆ ಒಳಗಾಗುವುದು ಬೇಡ. ಯಾವುದೇ ಲಕ್ಷಣ ಗೋಚರಿಸಿದರೆ ಚಿಕಿತ್ಸೆ ಪಡೆದುಕೊಳ್ಳಿ. 60 ವರ್ಷ ಮೇಲ್ಪಟ್ಟವರು ಮಾಸ್ಕ್ ಧರಿಸುವಂತೆ ಸೂಚನೆ ನೀಡಿದರು.