ETV Bharat Karnataka

ಕರ್ನಾಟಕ

karnataka

ETV Bharat / state

48 ಸಾವಿರ ಸರ್ಕಾರಿ ಶಾಲೆಗಳ ಪೈಕಿ 29 ಸಾವಿರ ಶಾಲೆಗಳ ಆಸ್ತಿ ದಾಖಲೆ ಸಮರ್ಪಕ: ಸಚಿವ ನಾಗೇಶ್ - ಶಿಕ್ಷಣ ಸಚಿವ ನಾಗೇಶ್

ಆಗಸ್ಟ್‌ನಿಂದ ಅಕ್ಟೋಬರ್‌ವರೆಗೆ ಸರ್ಕಾರಿ ಶಾಲಾ, ಕಾಲೇಜುಗಳ ಆಸ್ತಿ ಸಂರಕ್ಷಣಾ ಅಭಿಯಾನ ನಡೆಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ನಾಗೇಶ್ ಹೇಳಿದರು.

29-thousand-schools-property-record-is-adequate-says-minister-nagesh
48 ಸಾವಿರ ಸರ್ಕಾರಿ ಶಾಲೆಗಳ ಪೈಕಿ 29 ಸಾವಿರ ಶಾಲೆಗಳ ಆಸ್ತಿ ದಾಖಲೆ ಸಮರ್ಪಕ: ಸಚಿವ ನಾಗೇಶ್
author img

By

Published : Aug 24, 2022, 10:29 PM IST

ಬೆಂಗಳೂರು: ರಾಜ್ಯದಲ್ಲಿರುವ 48 ಸಾವಿರ ಸರ್ಕಾರಿ ಶಾಲೆಗಳ ಪೈಕಿ ಸುಮಾರು 29 ಸಾವಿರ ಸರ್ಕಾರಿ ಶಾಲೆಗಳ ಆಸ್ತಿ ದಾಖಲೆಗಳು ಸಮರ್ಪಕವಾಗಿದ್ದು, ಉಳಿದ ಶಾಲೆಗಳ ಆಸ್ತಿ ನೋಂದಣಿ ಮಾಡುವುದಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಆಗಸ್ಟ್‌ನಿಂದ ಅಕ್ಟೋಬರ್‌ವರೆಗೆ ಸರ್ಕಾರಿ ಶಾಲಾ, ಕಾಲೇಜುಗಳ ಆಸ್ತಿ ಸಂರಕ್ಷಣಾ ಅಭಿಯಾನ ನಡೆಸಲಾಗುತ್ತಿದೆ. ಶಾಲೆಯ ಆಸ್ತಿ ದಾಖಲೆಗಳನ್ನು ಶಿಸ್ತುಬದ್ಧಗೊಳಿಸಿ ನೋಂದಣಿ ಮಾಡಿಸಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಕಂದಾಯ ಇಲಾಖೆ ಹಾಗೂ ಇನ್ನುಳಿದ ಸಂಬಂಧಪಟ್ಟ ಇಲಾಖೆಗಳ ಸಂಯೋಜನೆಯಲ್ಲಿ ಈ ಕಾರ್ಯ ನಡೆಯಲಿದೆ. ಕಾನೂನಾತ್ಮಕ ಸಮಸ್ಯೆಗಳು, ಶಿಕ್ಷಣ ಇಲಾಖೆಯ ಆಸ್ತಿಯಾಗಿದ್ದರೂ ನೋಂದಣಿಯಾಗದೇ ಇರುವುದು, ಇತರ ಇಲಾಖೆಗಳಿಂದ ಶಿಕ್ಷಣ ಇಲಾಖೆಗೆ ನೀಡಿರುವುದು, ಖಾಸಗಿ ಸಂಸ್ಥೆ, ವ್ಯಕ್ತಿಗಳಿಂದ ದಾನ ಪಡೆದಿರುವುದು ಸೇರಿದಂತೆ ಎಲ್ಲ ರೀತಿಯ ಶಾಲೆಗಳ ಆಸ್ತಿಯನ್ನು ನೋಂದಣಿ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ವಿವರಿಸಿದರು.

ಬೆಂಗಳೂರಿನ ಚಿಕ್ಕಪೇಟೆಯಲ್ಲಿ 1945ರಿಂದ ನಡೆಯುತ್ತಿರುವ ಸರ್ಕಾರಿ ಶಾಲೆಯ ಆಸ್ತಿ ದಾಖಲೆಗಳನ್ನು ಶಿಕ್ಷಣ ಇಲಾಖೆಗೆ ವರ್ಗಾಯಿಸುವಂತೆ ಕಂದಾಯ ಇಲಾಖೆಗೆ ಕೋರಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕಂದಾಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸಚಿವ ನಾಗೇಶ್ ಉತ್ತರಿಸಿದರು.

ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆಗೆ ವಿಶೇಷ ಕ್ರಮ ವಹಿಸಿದ ಪರಿಣಾಮ ಕಳೆದ ಕೆಲವೇ ತಿಂಗಳಲ್ಲಿ ಸುಮಾರು 2,500ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ಆಸ್ತಿಗಳು ನೋಂದಣಿಯಾಗಿವೆ ಎಂದೂ ಮಾಹಿತಿ ನೀಡಿದರು.

ಇದನ್ನೂ ಓದಿ:ಮದರಸಾಗಳ ಪ್ರಸಕ್ತ ಶಿಕ್ಷಣ ಸ್ವರೂಪದ ಕುರಿತು ವರದಿ ಸಂಗ್ರಹ: ಸಚಿವ ನಾಗೇಶ್

ABOUT THE AUTHOR

...view details