ಬೆಂಗಳೂರು: ರಾಜ್ಯದಲ್ಲಿಂದು 61,804 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 291 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,96,148ಕ್ಕೆ ಏರಿಕೆ ಆಗಿದೆ.
ಇತ್ತ 745 ಮಂದಿ ಡಿಸ್ಜಾರ್ಜ್ ಆಗಿದ್ದು 29,51,492 ಮಂದಿ ಗುಣಮುಖರಾಗಿದ್ದಾರೆ. 8 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 38,211ಕ್ಕೆ ಏರಿಕೆ ಆಗಿದೆ. ಸದ್ಯ ಸಕ್ರಿಯ ಪ್ರಕರಣಗಳು 6,416 ರಷ್ಟಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ.0.47% ರಷ್ಟಿದ್ದರೆ ಸಾವಿನ ಪ್ರಮಾಣ 2.74% ರಷ್ಟಿದೆ.