ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 2020-21ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮೇ 24 ರಿಂದ ಜೂನ್ 16ರ ವರೆಗೆ ನಡೆಸುವುದಾಗಿ ಇಲಾಖೆ ತಿಳಿಸಿದೆ.
ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಟೈಮ್ ಟೇಬಲ್ ಪ್ರಕಾರ ಮೇ 24 ರಿಂದ ಜೂನ್ 16 ರವರೆಗೆ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕವನ್ನು ನಿಗದಿಪಡಿಸಲಾಗಿದೆ.
ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
ಜೂನ್ 14ರಂದು IPMAT ಮತ್ತು NEST ಪರೀಕ್ಷೆಗಳು ನಡೆಯುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ವೇಳಾಪಟ್ಟಿಯನ್ನು ಎಲ್ಲಾ ಪ್ರಾಂಶುಪಾಲರುಗಳು ಕಡ್ಡಾಯವಾಗಿ ಕಾಲೇಜಿನ ಸೂಚನಾ ಫಲಕದಲ್ಲಿ ಪ್ರಕಟಿಸಿ ವಿದ್ಯಾರ್ಥಿಗಳ ಗಮನಕ್ಕೆ ತರಲು ಇಲಾಖೆ ಸೂಚಿಸಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಪರಿಷೃತ ವೇಳಾಪಟ್ಟಿ ಈ ಕೆಳಗಿನಂತಿದೆ.
- 24-5-2021- ಇತಿಹಾಸ
- 25-5-2021- ಕರ್ನಾಟಕ ಸಂಗೀತ- ಹಿಂದೂಸ್ತಾನಿ ಸಂಗೀತ
- 26-5-2021- ಭೂಗೋಳಶಾಸ್ತ್ರ
- 27-5-2021- ಮನಃಶಾಸ್ತ್ರ, ಬೇಸಿಕ್ ಮ್ಯಾಥ್ಸ್
- 28-5-2021- ತರ್ಕ ಶಾಸ್ತ್ರ
- 29-5-2021- ಕನ್ನಡ
- 31-5-2021- ಲೆಕ್ಕಶಾಸ್ತ್ರ, ಗಣಿತ, ಶಿಕ್ಷಣ
- 01-6-2021- ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯುಟಿ ಮತ್ತು ವೆಲ್ ನೆಸ್
- 02-6-2021- ರಾಜ್ಯಶಾಸ್ತ್ರ, ಗಣಕ ವಿಜ್ಞಾನ
- 03-6-2021- ಜೀವಶಾಸ್ತ್ರ, ಎಲೆಕ್ಟ್ರಾನಿಕ್
- 04-6-2021- ಅರ್ಥಶಾಸ್ತ್ರ
- 05-6-2021- ಗೃಹ ವಿಜ್ಞಾನ
- 07-6-2021- ವ್ಯವಹಾರ ಅಧ್ಯಯನ, ಭೌತಶಾಸ್ತ್ರ
- 08-6-2021- ಭೂಗರ್ಭ ಶಾಸ್ತ್ರ
- 09-6-2021- ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್
- 10-6-2021- ಸಮಾಜಶಾಸ್ತ್ರ, ರಸಾಯನಶಾಸ್ತ್ರ
- 11-6-2021- ಉರ್ದು,ಸಂಸ್ಕೃತ
- 12-6-2021- ಸಂಖ್ಯಾಶಾಸ್ತ್ರ
- 14-6-2021- ಐಚ್ಛಿಕ ಕನ್ನಡ
- 15-6-2021- ಹಿಂದಿ
- 16-6-2021- ಇಂಗ್ಲಿಷ್
Last Updated : Mar 12, 2021, 5:36 PM IST