ಬೆಂಗಳೂರು:ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಏಪ್ರಿಲ್ 22ರಿಂದ ಮೇ 18ರ ತನಕ ವಿವಿಧ ಪರೀಕ್ಷೆಗಳು ನಡೆಯಲಿವೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಏಪ್ರಿಲ್, ಮೇ ತಿಂಗಳಲ್ಲಿ ನಡೆಸಲು ತಯಾರಿ ನಡೆದಿತ್ತು. ಈ ಹಿಂದೆಯೂ ಪಿಯು ಬೋರ್ಡ್ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿತ್ತು. ಆದರೆ, ಜೆಇಇ (JEE) ಪರೀಕ್ಷೆಯ ಮೊದಲನೆಯ ಸೆಷನ್ ಏಪ್ರಿಲ್ 16ರಿಂದ 21ರವರೆಗೆ ನಡೆಸಲು ವೇಳಾಪಟ್ಟಿ ಬಿಡುಗಡೆ ಆಗಿತ್ತು. ಇದೇ ವೇಳೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಏಪ್ರಿಲ್ 16ರಿಂದ ಮೇ 06ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು. ಜೆಇಇ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ದಿನಾಂಕಗಳು ಒಟ್ಟಿಗೆ ಬರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯ ಪರಿಷ್ಕರಿಸಿ, ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆಗೊಳಿಸಲಾಗಿತ್ತು.
ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ ವಿದ್ಯಾರ್ಥಿಗಳು/ಪೋಷಕರುಗಳಿಂದ ಆಕ್ಷೇಪಣೆಗಳನ್ನು ಸಲ್ಲಿಸಲು ಮಾರ್ಚ್ 5ರ ಸಂಜೆ 5:00 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿತ್ತು. ಇದೀಗ ವೇಳಾಪಟ್ಟಿಯ ದಿನದಂದು ಸಿಎಲ್ಎಟಿ ಪರೀಕ್ಷೆ, ಎಐಎಂಎ ಯುಜಿಎಟಿ ಪರೀಕ್ಷೆ ಹಾಗೂ ನವೋದಯ ವಿದ್ಯಾಲಯ ಪರೀಕ್ಷೆ ಇರುವುದಾಗಿ ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಹೀಗಾಗಿ ಇದನ್ನ ಪರಿಗಣಿಸಿ ಅಂತಿಮ ವೇಳಾಪಟ್ಟಿಯನ್ನು ಪರಿಷ್ಕರಿಸಿ ಬಿಡುಗಡೆ ಮಾಡಲಾಗಿದೆ. ಅದರಂತೆ ಏಪ್ರಿಲ್ 22ರಿಂದ ಮೇ 18ರವರೆಗೆ ಪರೀಕ್ಷೆ ನಡೆಯಲಿದೆ.
- ಪರೀಕ್ಷೆ ವೇಳಾಪಟ್ಟಿ ಈ ಕೆಳಗಿನಂತಿದೆ:
- 22-4-2022 - ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
- 23-4-2022 - ಗಣಿತ, ಶಿಕ್ಷಣ ಶಾಸ್ತ್ರ
- 25-4-2022 - ಅರ್ಥಶಾಸ್ತ್ರ
- 26-4-2022 - ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
- 27-4-2022 - ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
- 28-4-2022 - ಅರೇಬಿಕ್, ಕನ್ನಡ
- 2-5-2022 - ಭೂಗೋಳ ಶಾಸ್ತ್ರ, ಜೀವಶಾಸ್ತ್ರ
- 4-5-2022 - ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ನೆಸ್
- 5-5-2022 - ಇಂಗ್ಲಿಷ್
- 10- 5-2022 - ಇತಿಹಾಸ, ಭೌತಶಾಸ್ತ್ರ
- 12-5-2022 - ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
- 14-5-2022 - ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
- 17 -5-2022 - ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ, ಐಚ್ಛಿಕ ಕನ್ನಡ
- 18-5-2022 - ಹಿಂದಿ
ಇದನ್ನೂ ಓದಿ:ಅಪಘಾತದಲ್ಲಿ ಗಾಯಾಳು ಮಹಿಳೆಯ ರಕ್ಷಣೆಗೆ ತಮ್ಮ ಕಾರನ್ನೇ ನೀಡಿದ ಚಿಕ್ಕಬಳ್ಳಾಪುರ ಎಸ್ಪಿ