ಕರ್ನಾಟಕ

karnataka

ETV Bharat / state

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಿದೆ.

2nd PUC Supplementary Exam Result Declared
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

By

Published : Sep 12, 2022, 11:35 AM IST

Updated : Sep 12, 2022, 11:43 AM IST

ಬೆಂಗಳೂರು:ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಬೆಳಗ್ಗೆ 11 ಗಂಟೆ ಬಳಿಕ http://karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗುತ್ತಿದೆ. ಪೂರಕ ಪರೀಕ್ಷೆಗೆ 1,85,421 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.

ರಾಜ್ಯಾದ್ಯಂತ ಒಟ್ಟು 307 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಒಟ್ಟು 678 ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಈ ವರ್ಷ ಕರ್ನಾಟಕ 2nd PUC ಫಲಿತಾಂಶವನ್ನು ಜೂನ್ 18, 2022 ರಂದು ಪ್ರಕಟಿಸಲಾಗಿತ್ತು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ 6,84,255 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 6,83,563 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ ಒಟ್ಟು 4,22,966 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 5,99,794 ಹೊಸ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 4,02,697 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.

ಇದನ್ನೂ ಓದಿ:ಜೆಇಇ ಅಡ್ವಾನ್ಸ್ಡ್ ಫಲಿತಾಂಶ ಪ್ರಕಟ: ಫಲಿತಾಂಶ ನೋಡಲು ನೇರ ಲಿಂಕ್ ಇಲ್ಲಿದೆ..

Last Updated : Sep 12, 2022, 11:43 AM IST

ABOUT THE AUTHOR

...view details