ಬೆಂಗಳೂರು:ಮೈಸೂರು ಮೇಯರ್ ಆಯ್ಕೆ ಚುನಾವಣೆ ಸಂದರ್ಭ ವಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ್ದ ಮೂವರು ಕಾಂಗ್ರೆಸ್ ನಾಯಕರನ್ನು ಕಾಂಗ್ರೆಸ್ ಪಕ್ಷ ಅಮಾನತು ಮಾಡಿದೆ.
ಫೆ.24 ರಂದು ನಡೆದ ಮೈಸೂರು ಮಹಾನಗರ ಪಾಲಿಕೆ ಮಹಾಪೌರರು/ಉಪ ಮಹಾಪೌರರ ಚುನಾವಣೆ ನಂತರ ಮೈಸೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರುಗಳು ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರುಗಳ ವಿರುದ್ಧ ಪ್ರತಿಭಟನೆ ಮಾಡಿ ವ್ಯಕ್ತಿಗತವಾಗಿ ಘೋಷಣೆಗಳನ್ನು ಕೂಗಿರುವುದು ಮಾಧ್ಯಮಗಳಲ್ಲಿ ವರದಿಯಾಗಿತ್ತು.
ಈ ಹಿನ್ನೆಲೆಯಲ್ಲಿ ಈ ಕೆಳಕಂಡ ಮುಖಂಡರು ಮಾಡಿರುವ ಪ್ರತಿಭಟನೆಯಿಂದ ಪಕ್ಷಕ್ಕೆ ಹಾನಿ ಉಂಟಾಗಿದೆ ಎಂದು ತಿಳಿಸಿ, ಇವರ ವರ್ತನೆಯನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಿ ಸದರಿಯವರನ್ನು ಪಕ್ಷದಿಂದ ಅಮಾನತ್ತು ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್. ಮೂರ್ತಿ ಅವರು ಶಿಫಾರಸು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರು ಮುಖಂಡರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತು ಮಾಡಿ, ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಗೆ ಕಳುಹಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ತಿಳಿಸಿದ್ದಾರೆ.