ಕರ್ನಾಟಕ

karnataka

ETV Bharat / state

ಮೋದಿ ಸಂಚರಿಸಿದ ರಸ್ತೆ ಕಳಪೆ ಕಾಮಗಾರಿ: ಬಿಬಿಎಂಪಿಯಿಂದ ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ - ಬಿಬಿಎಂಪಿಯಿಂದ ಗುತ್ತಿಗೆದಾರನಿಗೆ 3 ಲಕ್ಷ ದಂಡ

ಪ್ರಧಾನಿ ಮೋದಿ ರಾಜ್ಯ ಭೇಟಿ ವೇಳೆ ಬೆಂಗಳೂರಿನಲ್ಲಿ ನಿರ್ಮಿಸಲಾಗಿದ್ದ ರಸ್ತೆಯಲ್ಲಿ ಗುಂಡಿ ಕಂಡುಬಂದ ಸಂಬಂಧ ಗುತ್ತಿಗೆದಾರನಿಗೆ ಬಿಬಿಎಂಪಿ ದಂಡ ವಿಧಿಸಿದೆ.

3-lakh-fine-to-contractor-from-bbmp-to-poor-road-work
ಮೋದಿ ಸಂಚರಿಸಿದ ರಸ್ತೆ ಕಳಪೆ ಕಾಮಗಾರಿ: ಬಿಬಿಎಂಪಿಯಿಂದ ಗುತ್ತಿಗೆದಾರನಿಗೆ 3 ಲಕ್ಷ ದಂಡ

By

Published : Jun 25, 2022, 4:33 PM IST

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯ ಭೇಟಿ ವೇಳೆ ನಗರದಲ್ಲಿ ನಿರ್ಮಿಸಲಾಗಿದ್ದ ರಸ್ತೆಯಲ್ಲಿ ಕಂಡುಬಂದಿದ್ದ ಗುಂಡಿ ಸಂಬಂಧ ಗುತ್ತಿಗೆದಾರನಿಗೆ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯು 3 ಲಕ್ಷ ರೂಪಾಯಿ ದಂಡ ವಿಧಿಸಿದೆ. ನೋಟಿಸ್ ಜಾರಿ ಮಾಡಿದ ಬೆನ್ನಲ್ಲೇ ಗುತ್ತಿಗೆದಾರ ರಮೇಶ್ ಎಂಬುವರಿಗೆ ಬಿಬಿಎಂಪಿ ದಂಡ ಹಾಕಿದೆ ಎಂದು ತಿಳಿದು ಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಜೂನ್ 20ರಂದು ರಾಜಧಾನಿಗೆ ಬಂದಾಗ ಅವರು ಸಂಚರಿಸುವ ರಸ್ತೆಗಳ ದುರಸ್ತಿ ಕಾರ್ಯ ಸಮರೋಪಾದಿಯಲ್ಲಿ ನಡೆದಿತ್ತು. ಆದರೆ ಪ್ರಧಾನಿ ಭೇಟಿ ಬಳಿಕ ಅದೇ ರಸ್ತೆಯಲ್ಲಿ ಗುಂಡಿಗಳು ಕಂಡುಬಂದಿದ್ದವು. ಕಳಪೆ ಕಾಮಗಾರಿ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ, ಪ್ರಧಾನಿ ಕಾರ್ಯಾಲಯ ವರದಿ ಕೇಳಿತ್ತು. ನಂತರ ಬಿಬಿಎಂಪಿ ಆಯುಕ್ತರಿಗೆ ವರದಿ ನೀಡುವಂತೆ ಸಿಎಂ ಕಚೇರಿಯಿಂದ ಸೂಚನೆ ನೀಡಲಾಗಿತ್ತು.

11.50 ಕೋಟಿ ರೂ. ವೆಚ್ಚದಲ್ಲಿ 9 ಕಿಲೋಮೀಟರ್ ರಸ್ತೆ ನಿರ್ಮಿಸಲಾಗಿದೆ. ಕಳಪೆ ಕಾಮಗಾರಿ ಮಾಡಿದ ಸಂಬಂಧ ಮೂವರು ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಅಭಿಯಂತರ ಪ್ರಹ್ಲಾದ್ ಶೋಕಾಸ್ ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿದ್ದರು.

ಇದನ್ನೂ ಓದಿ:ಚಿಕ್ಕಮಗಳೂರಲ್ಲಿ ಪ್ರಕೃತಿ ವಿಸ್ಮಯ.. ಈಚಲು ಮರದಲ್ಲಿ ಗಣಪ ಪ್ರತ್ಯಕ್ಷ!

ABOUT THE AUTHOR

...view details