ಬೆಂಗಳೂರು :ಕೋವಿಡ್-19 ಕರ್ತವ್ಯದ ವೇಳೆ ಮೃತಪಟ್ಟ ಸರ್ಕಾರಿ ನೌಕರರಿಗೆ 30 ಲಕ್ಷ ರೂ. ವಿಮಾ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಸರ್ಕಾರ, ಕೋವಿಡ್-19 ಕರ್ತವ್ಯದ ವೇಳೆ ಮೃತರಾಗುವ ಸರ್ಕಾರಿ ನೌಕರರಿಗೆ 30 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಿದೆ. ಜೊತೆಗೆ ಕೋವಿಡ್-19 ಕೆಲಸದಲ್ಲಿ ಪಾಲ್ಗೊಂಡ ವೇಳೆ ಕೊರೊನಾ ಸೋಂಕು ತಗುಲಿದರೆ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸುವುದಾಗಿ ತಿಳಿಸಿದೆ.
ಕೋವಿಡ್ -19 ಕರ್ತವ್ಯದ ವೇಳೆ ಮೃತಪಡುವ ಸರ್ಕಾರಿ ನೌಕರರಿಗೆ ₹30 ಲಕ್ಷ ವಿಮಾ ಪರಿಹಾರ - employees who die during Kovid-19 duty
ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘ ಸಿಎಂಗೆ ಮನವಿ ಮಾಡಿತ್ತು. ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲಾ ವೃಂದದ ಸರ್ಕಾರಿ ನೌಕರರನ್ನು ನಿಯೋಜಿಸಲಾಗುತ್ತಿದೆ. ಕೊರೊನಾ ನಿಯಂತ್ರಣ ಕರ್ತವ್ಯದಲ್ಲಿರುವ ನೌಕರರು ಸೋಂಕಿಗೆ ಸಿಲುಕಿ ಅಕಾಲಿಕ ಮರಣ ಹೊಂದಿದ್ದಾರೆ..
ಸರ್ಕಾರದ ಆದೇಶ
ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘ ಸಿಎಂಗೆ ಮನವಿ ಮಾಡಿತ್ತು. ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲಾ ವೃಂದದ ಸರ್ಕಾರಿ ನೌಕರರನ್ನು ನಿಯೋಜಿಸಲಾಗುತ್ತಿದೆ. ಕೊರೊನಾ ನಿಯಂತ್ರಣ ಕರ್ತವ್ಯದಲ್ಲಿರುವ ನೌಕರರು ಸೋಂಕಿಗೆ ಸಿಲುಕಿ ಅಕಾಲಿಕ ಮರಣ ಹೊಂದಿದ್ದಾರೆ. ಹೀಗಾಗಿ ನೌಕರರಿಗೆ ಮತ್ತು ಅವರ ಕುಟುಂಬವರ್ಗಕ್ಕೆ ಮನೋಸ್ಥೈರ್ಯ ತುಂಬಿಸುವ ನಿಟ್ಟಿನಲ್ಲಿ ವಿಮಾ ಪರಿಹಾರ ಮೊತ್ತ ನೀಡುವಂತೆ ಮನವಿ ಮಾಡಿದ್ದರು.
ನೌಕರರ ಸಂಘದ ಮನವಿಯನ್ನು ಪುರಸ್ಕರಿಸಿರುವ ಸರ್ಕಾರ ಇದೀಗ ಕೋವಿಡ್-19 ಕರ್ತವ್ಯದಲ್ಲಿರುವ ಸರ್ಕಾರಿ ನೌಕರರಿಗೂ ವಿಮಾ ಪರಿಹಾರ ನೀಡಲು ನಿರ್ಧರಿಸಿದೆ.