ಕರ್ನಾಟಕ

karnataka

ETV Bharat / state

ದ್ವಿತೀಯ ಪಿಯು ಪಠ್ಯದಲ್ಲಿ ಶೇ. 30ರಷ್ಟು ಕಡಿತ: ಪುನರಾವರ್ತಿತ ವಿದ್ಯಾರ್ಥಿಗಳಿಗೂ ಅನ್ವಯ

ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ಪುನರಾವರ್ತಿತ ಹಾಗೂ ಖಾಸಗಿಯಾಗಿ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳಿಗೂ ಸಹ ಪಠ್ಯದಲ್ಲಿ ಶೇ. 30ರಷ್ಟು ಕಡಿತ ಅನ್ವಯಿಸುತ್ತದೆ ಎಂದು ಪಿಯು ಬೋರ್ಡ್​ ನಿರ್ದೇಶಕರು ತಿಳಿಸಿದ್ದಾರೆ.

30 percent reduction in secondary PU text
ದ್ವಿತೀಯ ಪಿಯು ಪಠ್ಯದಲ್ಲಿ ಶೇ.30 ರಷ್ಟು ಕಡಿತ

By

Published : Feb 25, 2021, 5:01 PM IST

ಬೆಂಗಳೂರು: ಕೋವಿಡ್ ಹಿನ್ನೆಲೆ ಎಲ್ಲೆಡೆ ಲಾಕ್​ಡೌನ್ ಜಾರಿಯಿದ್ದ ಕಾರಣ 2020-21ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ನಿಗದಿತ ಸಮಯದಲ್ಲಿ ಪ್ರಾರಂಭವಾಗಿಲ್ಲ. ಹೀಗಾಗಿ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಪಠ್ಯದಲ್ಲಿ ಶೇ. 30ರಷ್ಟು ಕಡಿತ ಮಾಡಿ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಅಲ್ಲದೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ಪುನರಾವರ್ತಿತ ಹಾಗೂ ಖಾಸಗಿಯಾಗಿ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳಿಗೂ ಸಹ ಇದು ಅನ್ವಯಿಸುತ್ತದೆ ಎಂದು ಇಲಾಖಾ ನಿರ್ದೇಶಕರು ತಿಳಿಸಿದ್ದಾರೆ.

ವಿಶೇಷ ಸೂಚನೆಯಾಗಿ ಈ ಪಠ್ಯವಸ್ತು ಕಡಿತ 2020-21ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯಿಸುತ್ತದೆ. 2021-22ರ ಶೈಕ್ಷಣಿಕ ವರ್ಷದಿಂದ ಪಠ್ಯದಲ್ಲಿ ಯಾವುದೇ ಕಡಿತ ಇರುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ABOUT THE AUTHOR

...view details