ಕರ್ನಾಟಕ

karnataka

ETV Bharat / state

ಮೈತ್ರಿ ಸರ್ಕಾರದಲ್ಲಿ ಅನುಮೋದನೆ ನೀಡಿದ್ದ 3054 ಗ್ರಾಮೀಣ ರಸ್ತೆ ಕಾಮಗಾರಿಗಳಿಗೆ ತಡೆ! - Rural Road Works Blocked by Alliance Government

ಮೈತ್ರಿ ಸರ್ಕಾರದ ಕೆಲ ಕಾಮಗಾರಿಗಳಿಗೆ ತಡೆಯೊಡ್ಡುತ್ತಿರುವ ಬಿಜೆಪಿ ಸರ್ಕಾರ ಈ ಬಾರಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕೈಗೆತ್ತಿಕೊಂಡಿದ್ದ ಗ್ರಾಮೀಣ ರಸ್ತೆ ಕಾಮಗಾರಿಗಳಿಗೆ ತಡೆ ಹಾಕಿದೆ.

ಸಾಂವಿಧಾನಸೌ

By

Published : Aug 31, 2019, 4:01 AM IST

ಬೆಂಗಳೂರು:ಈಗಾಗಲೇ ಹಿಂದಿನ ಸರ್ಕಾರದ ಹಲವು ಕಾಮಗಾರಿಗಳಿಗೆ ಬ್ರೇಕ್ ಹಾಕುತ್ತಿರುವ ಬಿಜೆಪಿ ಸರ್ಕಾರ ಇದೀಗ ಗ್ರಾಮೀಣ ರಸ್ತೆ ಕಾಮಗಾರಿಗಳಿಗೆ ತಡೆಯೊಡ್ಡಿದೆ.

ಹಿಂದಿನ ಮೈತ್ರಿ ಸರ್ಕಾರದ ಕೆಲ ಕಾಮಗಾರಿಗಳಿಗೆ ತಡೆಯೊಡ್ಡುತ್ತಿರುವ ಬಿಜೆಪಿ ಸರ್ಕಾರ ಇದೀಗ ಹಿಂದಿನ ಸರ್ಕಾರ ಅನುಮೋದನೆ ನೀಡಿರುವ ಮತ್ತಷ್ಟು ಕಾಮಗಾರಿಗಳಿಗೆ ಬ್ರೇಕ್ ಹಾಕಿದೆ. ಈ ಬಾರಿ ಸರ್ಕಾರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಕೈಗೆತ್ತಿಕೊಂಡಿದ್ದ ಗ್ರಾಮೀಣ ರಸ್ತೆ ಕಾಮಗಾರಿಗಳಿಗೆ ತಡೆ ಹಾಕಿದೆ.

2018-19 ಹಾಗೂ 2019-20ನೇ ಸಾಲಿನಲ್ಲಿ ಗ್ರಾಮೀಣ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದ ಕಾಮಗಾರಿಗಳನ್ನು ಸ್ಥಗಿತಗೊಳಿಸಿ, ಯತಾಸ್ಥಿತಿ ಕಾಪಾಡಲು ಸರ್ಕಾರ ಸೂಚನೆ ನೀಡಿದೆ. ಆ ಮೂಲಕ‌ ಬರೋಬ್ಬರಿ 3054 ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿದೆ.

ಹಿಂದಿನ ಮೈತ್ರಿ ಸರ್ಕಾರ ಗ್ರಾಮೀಣ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿತ್ತು. ಇದೀಗ ಇಲಾಖೆ ಹೊರಡಿಸಿರುವ ಆದೇಶದಂತೆ ತಕ್ಷಣದಿಂದ ಜಾರಿಗೆ ಬರುವಂತೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದ ಗ್ರಾಮೀಣ ರಸ್ತೆ ಕಾಮಗಾರಿಗಳ‌ ಅನುಷ್ಠಾನ‌ ಮಾಡದಂತೆ ಹಾಗೂ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿದೆ.

ABOUT THE AUTHOR

...view details