ಕರ್ನಾಟಕ

karnataka

ETV Bharat / state

ಉಜ್ವಲ್ ಯೋಜನೆಯಡಿ ರಾಜ್ಯದಲ್ಲಿ 31.17 ಲಕ್ಷ ಉಚಿತ ಸಿಲಿಂಡರ್ ವಿತರಣೆ

ಉಜ್ವಲ್ ಯೋಜನೆಯಡಿ ರಾಜ್ಯದ 31.17 ಲಕ್ಷ ಫಲಾನುಭವಿಗಳಿಗೆ ಮೂರು ತಿಂಗಳು ಉಚಿತ ಅಡುಗೆ ಅನಿಲ ವಿತರಿಸಲಿದೆ. ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ರಾಜ್ಯದ 1 ಲಕ್ಷ ಕುಟುಂಬಗಳಿಗೆ ಮೇ ಆರಂಭದಿಂದ ಮೂರು ಸಿಲಿಂಡರ್ ಉಚಿತವಾಗಿ ವಿತರಿಸಲಾಗುತ್ತದೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಸರ್ಕಾರದ ಮಾಹಿತಿ
ಸರ್ಕಾರದ ಮಾಹಿತಿ

By

Published : Apr 21, 2020, 8:59 PM IST

ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಿಸಲು ದೇಶಾದ್ಯಂತ ಲಾಕ್‍ಡೌನ್ ಜಾರಿಗೊಳಿಸಿರುವ ಕೇಂದ್ರ ಸರ್ಕಾರ ತನ್ನ ಉಜ್ವಲ್ ಯೋಜನೆಯಡಿ ರಾಜ್ಯದ 31.17 ಲಕ್ಷ ಫಲಾನುಭವಿಗಳಿಗೆ ಮೂರು ತಿಂಗಳು ಉಚಿತ ಅಡುಗೆ ಅನಿಲ ವಿತರಿಸಲಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‍ಗೆ ಮಾಹಿತಿ ನೀಡಿದೆ.

ಕೊರೊನಾ ನಿಯಂತ್ರಣದ ಕುರಿತು ಸರ್ಕಾರಕ್ಕೆ ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲ ವಿಕ್ರಂ ಹುಯಿಲ್ಗೋಳ ಅವರು ಸಲ್ಲಿಸಿರುವ ಲಿಖಿತ ಹೇಳಿಕೆಯಲ್ಲಿ ಈ ಮಾಹಿತಿ ನೀಡಲಾಗಿದೆ.

ಲಾಕ್‍ಡೌನ್ ಅವಧಿಯಲ್ಲಿ ಬಡವರಿಗೆ ಅಗತ್ಯ ನೆರವು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಉಜ್ವಲ್ ಯೋಜನೆ ವ್ಯಾಪ್ತಿಗೆ ಬರುವ ಫಲಾನುಭವಿಗಳಿಗೆ ಏಪ್ರಿಲ್‍ನಿಂದ ಜೂನ್‍ವರೆಗೆ ಮೂರು ಗ್ಯಾಸ್ ಸಿಲಿಂಡರ್ ಗಳನ್ನು ಉಚಿತವಾಗಿ ನೀಡಲು ತೀರ್ಮಾನಿಸಿದೆ.

ಅದರಂತೆ, ಉಜ್ವಲ್ ಯೋಜನೆಯ 31.17 ಲಕ್ಷ ಫಲಾನುಭವಿಗಳು ರಾಜ್ಯದಲ್ಲಿದ್ದು, ಇವರಿಗೆ ಮೊದಲ ಸಿಲಿಂಡರ್ ರೀಫಿಲ್ಲಿಂಗ್ ಗೆ ಮುಂಗಡವಾಗಿ ಹಣ ಪಾವತಿಸಲಾಗಿದೆ. ಏಪ್ರಿಲ್ 19 ರ ವರೆಗೆ 223 ಕೋಟಿ ರೂಪಾಯಿ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ. ಇದರ ಜೊತೆಗೆ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ರಾಜ್ಯದ 1 ಲಕ್ಷ ಕುಟುಂಬಗಳಿಗೆ ಮೇ ಆರಂಭದಿಂದ ಮೂರು ಸಿಲಿಂಡರ್ ಉಚಿತವಾಗಿ ವಿತರಿಸಲಾಗುತ್ತದೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ABOUT THE AUTHOR

...view details