ಬೆಂಗಳೂರು: ರಾಜ್ಯದಲ್ಲಿಂದು 65,892 ಮಂದಿಗೆ ಕೊರೊನಾ ಟೆಸ್ಟ್ ನಡೆಸಲಾಗಿದ್ದು, ಇದರಲ್ಲಿ 3,130 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,05,947ಕ್ಕೆ ಏರಿಕೆ ಆಗಿದೆ.
ಇಂದು 8,715 ಮಂದಿ ಗುಣಮುಖರಾಗಿದ್ದು, ಈವರೆಗೆ 7,19,558 ಮಂದಿ ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗಿದ್ದಾರೆ. ಹಾಗೇ ಕೊರೊನಾಗೆ 42 ಸೋಂಕಿತರು ಬಲಿಯಾಗಿದ್ದು, 10,947 ಸಾವಿನ ಸಂಖ್ಯೆ ಏರಿಕೆ ಆಗಿದೆ.19 ಸೋಂಕಿತರು ಅನ್ಯ ಕಾರಣಕ್ಕೆ ಮೃತರಾಗಿದ್ದಾರೆ.
ಸದ್ಯ ಒಟ್ಟಾರೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು 75,423 ಇದ್ದು, 942 ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 14 ದಿನಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ 4,29,872 ಮಂದಿ ಹಾಗೂ ದ್ವಿತೀಯ ಸಂಪರ್ಕದಲ್ಲಿ 4,05,134 ಜನರು ಇದ್ದಾರೆ. ಹಾಗೇ 7 ದಿನಗಳಲ್ಲಿ 73,121 ಜನರು ಹೋಂ ಕ್ವಾರೆಂಟೈನ್ನಲ್ಲಿ ಇದ್ದಾರೆ.
ರಾಜಧಾನಿಯಲ್ಲೂ ಇಳಿದ ಕೊರೊನಾ ಸಂಖ್ಯೆ...!
ಇನ್ನು ರಾಜಧಾನಿ ಬೆಂಗಳೂರಿನಲ್ಲಿ 1,603 ಜನರಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ 3,27,376 ಕ್ಕೆ ಸೋಂಕಿತರ ಸಂಖ್ಯೆ ಏರಿಕೆ ಆಗಿದೆ.
ಇಂದು 4,031 ಗುಣಮುಖರಾಗಿದ್ದು, ಈವರೆಗೆ 2,74,397 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ನಗರದಲ್ಲಿ 49,224 ಸಕ್ರಿಯ ಪ್ರಕರಣಗಳಿವೆ. ಇಂದು 20 ಸೋಂಕಿತರು ಚಿಕಿತ್ಸೆ ಫಲಿಸದೇ ಮೃತರಾಗಿದ್ದು, ಸಾವಿನ ಸಂಖ್ಯೆ 3,754ಕ್ಕೆ ಏರಿಕೆ ಆಗಿದೆ.
ಇನ್ನು ಸಾಂಕ್ರಾಮಿಕ ಪಿಡುಗಿನ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಟೀಟ್ವ್ ಮಾಡಿದ್ದು, ರಾಜ್ಯದಲ್ಲಿ ಇಂದು 3,130 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. 8,715 ಜನ ಗುಣಮುಖ ಹೊಂದಿದ್ದಾರೆ. ಈ ಮೂಲಕ ಸತತ 12ನೇ ದಿನವೂ ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳನ್ನು ಮೀರಿಸಿದೆ. ಮಾಸ್ಕ್ ಧರಿಸುವುದು, ಕೈತೊಳೆಯುವುದು, ಅಂತರ ಕಾಯ್ದುಕೊಳ್ಳುವ ಮೂಲಕ ಕೋವಿಡ್ ವಿರುದ್ಧದ ನಮ್ಮ ಹೋರಾಟವನ್ನು ಮುಂದುವರೆಸೋಣಾ ಎಂದು ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.