ಬೆಂಗಳೂರು: ರಾಜ್ಯದಲ್ಲಿಂದು 3,156 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 31 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ 8,38,929ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 33,095 ಇದೆ.
ರಾಜ್ಯದಲ್ಲಿಂದು 3,156 ಕೊರೊನಾ ಕೇಸ್ ಪತ್ತೆ: 5,723 ಮಂದಿ ಗುಣಮುಖ - banglore corona news
ರಾಜ್ಯದಲ್ಲಿಂದು 3,156 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 8,38,929ಕ್ಕೆ ಏರಿಕೆಯಾಗಿದೆ.
3,156 ಕೋವಿಡ್ ಪಾಸಿಟಿವ್
ಇಂದು 5,723 ಮಂದಿ ಗುಣಮುಖರಾಗಿದ್ದು, ಈವರೆಗೆ 7,94,503 ಮಂದಿ ಬಿಡುಗಡೆಯಾಗಿದ್ದಾರೆ. ಮೃತಪಟ್ಟವರ ಸಂಖ್ಯೆ 11,312ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 916 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ 2.71% ಇದ್ದು, 0.98% ಮರಣ ಪ್ರಮಾಣ ಇದೆ.
ಬೆಂಗಳೂರಿನಲ್ಲಿ ಒಟ್ಟು 1,627 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದು, 3,708 ಮಂದಿ ಗುಣಮುಖರಾಗಿದ್ದಾರೆ. 9 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ 3,45,134ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 16,716 ಇದೆ.