ಕರ್ನಾಟಕ

karnataka

ETV Bharat / state

ನೈಟ್‌ ಕರ್ಪ್ಯೂ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ 371 ವಾಹನಗಳು ಸೀಜ್ - Karnataka Night curfew

ವೀಕೆಂಡ್ ಕರ್ಫ್ಯೂ ಹತ್ತಿರವಾಗುತ್ತಿದ್ದಂತೆ ನಗರದಲ್ಲಿ ನೈಟ್ ಕರ್ಫ್ಯೂವನ್ನು ಪೊಲೀಸರು ಮತ್ತಷ್ಟು ಬಿಗಿ ಗೊಳಿಸಿದ್ದು, ಬುಧವಾರ ರಾತ್ರಿಯಿಂದ ಗುರುವಾರದವರೆಗೆ ಒಟ್ಟು 10 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

371 vehicles sized for violation of night curfew rules in Bengaluru
ನೈಟ್‌ ಕರ್ಪ್ಯೂ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ 371 ವಾಹನಗಳು ಸೀಜ್

By

Published : Jan 7, 2022, 2:10 AM IST

ಬೆಂಗಳೂರು:ನಗರದಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನವರಿ 28 ರಿಂದ ಕಟ್ಟುನಿಟ್ಟಾಗಿ ನೈಟ್ ಕರ್ಪ್ಯೂ ಜಾರಿಮಾಡಿದ್ದರೂ ಸಹ ಸವಾರರು ನಿಯಮ ಉಲ್ಲಂಘಿಸಿ ವಾಹನಗಳಲ್ಲಿ ಅನಗತ್ಯವಾಗಿ ತಿರುಗಾಡುತ್ತಿದ್ದ 371 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಶಪಡಿಸಿಕೊಂಡಿರುವ ವಾಹನಗಳಲ್ಲಿ 324 ದ್ವಿಚಕ್ರ ವಾಹನ, ತ್ರಿಚಕ್ರ ವಾಹನ 11 ಹಾಗೂ 4 ಚಕ್ರದ 36 ವಾಹನಗಳು ಸೇರಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವೀಕೆಂಡ್ ಕರ್ಫ್ಯೂ ಹತ್ತಿರವಾಗುತ್ತಿದ್ದಂತೆ ನಗರದಲ್ಲಿ ನೈಟ್ ಕರ್ಫ್ಯೂವನ್ನು ಪೊಲೀಸರು ಮತ್ತಷ್ಟು ಬಿಗಿ ಗೊಳಿಸಿದ್ದು, ಬುಧವಾರ ರಾತ್ರಿಯಿಂದ ಗುರುವಾರದವರೆಗೆ ಒಟ್ಟು 10 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಶುಕ್ರವಾರ ರಾತ್ರಿಯಿಂದ ವೀಕೆಂಡ್​ ಕರ್ಫ್ಯೂ ಜಾರಿಗೆ ಬರಲಿದ್ದು, ರಾತ್ರಿ 10ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೂ ರಾಜ್ಯದಲ್ಲಿ ಬಾರ್, ವೈನ್ ಶಾಪ್ ಸೇರಿದಂತೆ ಯಾವುದೇ ರೀತಿಯ ಮದ್ಯದಂಗಡಿ ತೆರೆಯದಂತೆ ಅಬಕಾರಿ ಇಲಾಖೆ‌ ತಿಳಿಸಿದೆ.

ಇದನ್ನೂ ಓದಿ:ರಾಜ್ಯದಲ್ಲಿ ವೀಕೆಂಡ್‌ ಕರ್ಫ್ಯೂ ಜಾರಿ; ಬೆಂಗಳೂರಿನಲ್ಲಿ ಶಾಲೆಗಳಿಗೆ ರಜೆ- ಹೊಸ ನಿರ್ಬಂಧಗಳು ಹೀಗಿವೆ..

ABOUT THE AUTHOR

...view details