ಬೆಂಗಳೂರು:ಎಸ್‌ಡಿಆರ್‌ಎಂಎಫ್ ಅನುದಾನದಲ್ಲಿ 395.5 ಕೋಟಿ ರೂ. ಮುಂಗಡ ಹಣ ಬಿಡುಗಡೆ ಮಾಡಿದ ಕೇಂದ್ರಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಅಭಿನಂದನೆ ಸಲ್ಲಿಸಿದ್ದಾರೆ.
ಎಸ್‌ಡಿಆರ್‌ಎಂಎಫ್ ಅನುದಾನ: ಕೇಂದ್ರದಿಂದ ರಾಜ್ಯಕ್ಕೆ 395.5ಕೋಟಿ ಮುಂಗಡ ಹಣ ಬಿಡುಗಡೆ - SDRMF grant
ರಾಜ್ಯ ಸರ್ಕಾರದ ಮನವಿಯಂತೆ ಕೇಂದ್ರ ಸರ್ಕಾರವು ಎಸ್‌ಡಿಆರ್‌ಎಂಎಫ್ ಅನುದಾನದಲ್ಲಿ 395.5ಕೋಟಿ ಮುಂಗಡ ಹಣವನ್ನು ರಾಜ್ಯಕ್ಕೆ ಬಿಡುಗಡೆ ಮಾಡಿದೆ. ಹಾಗಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಕೇಂದ್ರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರದ ಮನವಿಯಂತೆ ಕೇಂದ್ರ ಸರ್ಕಾರವು ಎಸ್‌ಡಿಆರ್‌ಎಂಎಫ್ ಅನುದಾನದಲ್ಲಿ 395.5 ಕೋಟಿ ಮುಂಗಡ ಹಣವನ್ನು ರಾಜ್ಯಕ್ಕೆ ಬಿಡುಗಡೆ ಮಾಡಿದೆ. ಕರ್ನಾಟಕಕ್ಕೆ ಹೆಚ್ಚುವರಿಯಾಗಿ ನಾಲ್ಕು ಎನ್‌ಡಿಆರ್‌ಎಫ್ ತಂಡಗಳನ್ನು ಒದಗಿಸಿದ್ದು, ಅತ್ಯಂತ ಸ್ವಾಗತಾರ್ಹ. ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕದ ಜನತೆಯ ಪರವಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದೆವು. ಇದೀಗ ರಾಜ್ಯದ ಮನವಿಗೆ ಕೂಡಲೇ ಸ್ಪಂದಿಸಿದ ಕೇಂದ್ರ ಸರ್ಕಾರ, ಎಸ್‌ಡಿಆರ್‌ಎಫ್ ಫಂಡ್ 395.5 ಕೋಟಿ ಹಣವನ್ನು ಈಗ ಮುಂಗಡವಾಗಿ ಬಿಡುಗಡೆ ಮಾಡಿರುವುದು ಸಂತಸ ತಂದಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಟ್ವೀಟ್ ಮಾಡಿದ್ದಾರೆ.