ಬೆಂಗಳೂರು: ರಾಜ್ಯದಲ್ಲಿಂದು 1,16,141 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 399 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,99,098ಕ್ಕೆ ಏರಿಕೆಯಾಗಿದೆ.
ಈ ದಿನ 238 ಮಂದಿ ಗುಣಮುಖರಾಗಿದ್ದು, ಈವರೆಗೆ 29,53,565 ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿಗೆ ಇಂದು ಆರು ಮಂದಿ ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 38,249 ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ 7,255 ಪ್ರಕರಣಗಳು ಸಕ್ರಿಯವಾಗಿವೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ 0.34 ರಷ್ಟಿದ್ದು, ಸಾವಿನ ಪ್ರಮಾಣ ಶೇ. 1.50 ರಷ್ಟಿದೆ.