ಕರ್ನಾಟಕ

karnataka

ETV Bharat / state

ಸಂಕಷ್ಟದಲ್ಲಿರುವ ಕಲಾವಿದರಿಗೆ 4.82 ಕೋಟಿ ರೂ. ಆರ್ಥಿಕ ನೆರವು ಘೋಷಣೆ - ಬಡ ಕಲಾವಿದರಿಗೆ ಆರ್ಥಿಕ ಪ್ಯಾಕೇಜ್​

ಕೋವಿಡ್​ ಹಾಗೂ ಲಾಕ್​ಡೌನ್​ನಿಂದಾಗಿ ಸಂಕಷ್ಟಕ್ಕೊಳಗಾಗಿರುವ ಕಲಾವಿದರಿಗೆ ಇದೀಗ ರಾಜ್ಯ ಸರ್ಕಾರ ಆರ್ಥಿಕ ನೆರವು ಘೋಷಣೆ ಮಾಡಿದೆ.

ಅರವಿಂದ್​ ಲಿಂಬಾವಳಿ
ಅರವಿಂದ್​ ಲಿಂಬಾವಳಿ

By

Published : May 28, 2021, 2:00 AM IST

ಬೆಂಗಳೂರು:ಲಾಕ್​ಡೌನ್​ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ತಲಾ ಮೂರು ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲು 4.82 ಕೋಟಿ ರೂ. ಬಿಡುಗಡೆ ಮಾಡಲು ಮಂಜೂರಾತಿ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಮಾಹಿತಿ ನೀಡಿದ್ದಾರೆ.

ಕಲಾವಿದರಿಗೆ ತಲಾ ಮೂರು ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲು 482.85 ಲಕ್ಷ ರೂ. ಬಿಡುಗಡೆ ಮಾಡಲು ಮಂಜೂರಾತಿ ನೀಡಲಾಗಿದೆ.ಇದಕ್ಕೆ ಸಂಬಂಧಿಸಿದಂತೆ ಅಧಿಕೃತ ಆದೇಶ ಹೊರಡಿಸಲಾಗಿದ್ದು, ರಾಜ್ಯದ 16,095 ಬಡ ಕಲಾವಿದರು ಈ ಸೌಲಭ್ಯವನ್ನು ಪಡೆಯಲಿದ್ದಾರೆ ಎಂದು ತಿಳಿಸಿದರು.

ಸೇವಾ ಸಿಂಧು ಪೋರ್ಟಲ್​ ಮೂಲಕ ಅರ್ಜಿ ಸಲ್ಲಿಕೆ

ಕಲಾವಿದರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಲ್ಲಿ ಯಾವುದೇ ತೊಡಕು ಉಂಟಾದರೆ ಕೂಡಲೇ ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ತಾಯಿಗೆ ಕೋವಿಡ್ ನೆಗೆಟಿವ್, ಮಗುವಿಗೆ ಮಾತ್ರ ಪಾಸಿಟಿವ್​.. ವಾರಣಾಸಿಯಲ್ಲಿ ವಿಭಿನ್ನ ಪ್ರಕರಣ!

ಈ ಆರ್ಥಿಕ ನೆರವು ಪಡೆಯಲು ಮಾರ್ಗಸೂಚಿ ಸಿದ್ಧಪಡಿಸಲಾಗಿದ್ದು, ಅದರ ಅನುಸಾರ ಅರ್ಹ ಕಲಾವಿದರು ಆರ್ಥಿಕ ನೆರವಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು. ಪ್ರತಿ ಜಿಲ್ಲೆಯಲ್ಲೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರನ್ನೊಳಗೊಂಡ ಐದು ಜನರ ಸಮಿತಿಯು ಅರ್ಹ ಕಲಾವಿದರನ್ನು ಆಯ್ಕೆ ಮಾಡಿ ಕೇಂದ್ರ ಕಚೇರಿಗೆ ಕಳುಹಿಸುತ್ತದೆ. ನಂತರ ಕೇಂದ್ರ ಕಚೇರಿಯಿಂದ ಕಲಾವಿದರ ಖಾತೆಗೆ ನೇರವಾಗಿ ಆರ್​ಟಿಜಿಎಸ್​ ಮೂಲಕ ಪರಿಹಾರದ ಮೊತ್ತ ಜಮಾ ಆಗುತ್ತದೆ ಎಂದರು. ಪತ್ರಿಕಾ ಪ್ರಕಟಣೆ ಹೊರಡಿಸಿದ 15 ದಿನದೊಳಗೆ ಈ ಎಲ್ಲ ಪ್ರಕ್ರಿಯೆ ಮುಗಿಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ABOUT THE AUTHOR

...view details