ಕರ್ನಾಟಕ

karnataka

ETV Bharat / state

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4.95 ಲಕ್ಷ ಜನರಿಗೆ ಲಸಿಕೆ: MTB ನಾಗರಾಜ್ - ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4.95 ಲಕ್ಷ ಜನರಿಗೆ ಲಸಿಕೆ

ಬೆಂಗಳೂರು ಗ್ರಾಮಾಂತರ ಉಸ್ತುವಾಗಿ ಸಚಿವ ಎಂಟಿಬಿ ನಾಗರಾಜ ಅವರು ಇಂದು ಕೋವಿಡ್ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮ, ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಸರ್ಕಾರ ಕೈಗೊಂಡಿರುವ ಕೊರೊನಾ ಕ್ರಮಗಳನ್ನು ಜಿಲ್ಲೆಯಲ್ಲಿ ಕಠಿಣವಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು.

mtb nagaraj
ಎಂಟಿಬಿ ನಾಗರಾಜ

By

Published : Aug 6, 2021, 9:57 PM IST

ದೇವನಹಳ್ಳಿ: ಕೋವಿಡ್​​ ಮೂರನೇ ಅಲೆ ಎದುರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಜಿಲ್ಲೆಯ 4.95 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಕೋವಿಡ್ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮ, ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಸಭೆ ಎಂಟಿಬಿ ಅಧ್ಯಕ್ಷತೆಯಲ್ಲಿ ನಡೆಯಿತು.

ಕೊರೊನಾ ನಿಯಂತ್ರಣಕ್ಕೆ ಸಿಎಂ ಈಗಾಗಲೇ ಅಗತ್ಯ ನಿರ್ದೇಶನಗಳನ್ನು ನೀಡಿದ್ದು, ಅಧಿಕಾರಿಗಳು ತಪ್ಪದೇ ಪಾಲಿಸಬೇಕು ಹಾಗೂ ಸಾರ್ವಜನಿಕ ವಲಯದಲ್ಲಿ ಕೋವಿಡ್ ನಿಯಮಗಳು ಉಲ್ಲಂಘನೆಯಾಗದಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಕೋವಿಡ್​ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅಧಿಕಾರಿಗಳ ಜೊತೆ ಎಂಟಿಬಿ ನಾಗರಾಜ ಸಭೆ

ಜನಸಂದಣಿ ಸ್ಥಳಗಳಾದ ಮಾರುಕಟ್ಟೆ, ಮದುವೆ, ಜಾತ್ರೆ, ಕರಗ ಮಹೋತ್ಸವ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಸರ್ಕಾರ ಹೊರಡಿಸಿರುವ ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

ತಪ್ಪಿದಲ್ಲಿ, ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು, ಪ್ರತಿ ತಾಲೂಕಿನಲ್ಲಿ ತಹಶೀಲ್ದಾರ್ ಅವರ ನೇತೃತ್ವದಲ್ಲಿ ಸಭೆ ಕರೆದು ಆಯಾ ತಾಲೂಕುಗಳಲ್ಲಿರುವ ದೇವಸ್ಥಾನ, ಮಸೀದಿ ಹಾಗೂ ಚರ್ಚ್ ಹಾಗೂ ಇತರ ಧರ್ಮದ ಪ್ರಾರ್ಥನಾ ಮಂದಿರದಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಬೇಕು ಹಾಗೂ ದೇಗುಲದಲ್ಲಿ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಬೇಕು ಎಂದರು.

ಜಿಲ್ಲೆಯಲ್ಲಿ 4.95 ಲಕ್ಷ ಲಸಿಕೆ ನೀಡಲಾಗಿದೆ.

ತಾಲೂಕು ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಸಾರ್ವಜನಿಕರಿಗೆ ಇದುವರೆಗೂ 4.95 ಲಕ್ಷ ಲಸಿಕೆ ನೀಡಲಾಗಿದ್ದು, ಜಿಲ್ಲೆಗೆ ಹೆಚ್ಚಿನ ಕೋವಿಡ್ ಲಸಿಕೆಯನ್ನು ಪೂರೈಸುವಂತೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವ ಪ್ರಯಾಣಿಕರ ಮೇಲೆ ನಿಗಾವಹಿಸಲಾಗಿದೆ. ಪ್ರಯಾಣಿಕರ ನೆಗೆಟಿವ್ ವರದಿ ಪರಿಶೀಲಿಸಿ ನಂತರ ರಾಜ್ಯಕ್ಕೆ ಪ್ರವೇಶ ನೀಡಲಾಗುತ್ತಿದೆ ಎಂದರು.

For All Latest Updates

TAGGED:

ABOUT THE AUTHOR

...view details