ಕರ್ನಾಟಕ

karnataka

ETV Bharat / state

ಬೆಂಗಳೂರು... ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ - father killed children and committed suicide in Bangalore

ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ತಂ
ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ತಂ

By

Published : Nov 13, 2020, 2:47 PM IST

Updated : Nov 13, 2020, 4:07 PM IST

14:42 November 13

ಜೀವನದಲ್ಲಿ ಜಿಗುಪ್ಸೆಗೊಂಡ ತಂದೆ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ

ಬೆಂಗಳೂರು:ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿ ಮೂವರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೈಕೋ ಲೇಔಟ್ ರಮಣಶ್ರೀ ಎನ್​ಕ್ಲೇವ್ ಅಪಾರ್ಟ್​ಮೆಂಟ್​ವೊಂದರ ಮನೆಯಲ್ಲಿ‌ ದುರಂತ ಸಂಭವಿಸಿದೆ. ನೇಪಾಳ ಮೂಲದ ಜನಕರಾಜ್ ಬಿಸ್ತಾ (32) ಮಕ್ಕಳಾದ ಸರಸ್ವತಿ (14), ಹೇಮತಿ (9) ಹಾಗೂ ರಾಜ್ ಕುಮಾರ್ (3) ರನ್ನು ಕೊಲೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ರಮಣಶ್ರೀ ಎನ್​ಕ್ಲೇವ್​​ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡಿತ್ತಿದ್ದ ಜನಕರಾಜ್ ಬಿಸ್ತಾ ಪತ್ನಿ ನಂದಾದೇವಿ ಎರಡು ತಿಂಗಳ ಹಿಂದೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಳು. ಹೀಗಾಗಿ ಮಕ್ಕಳನ್ನು ನೋಡಿಕೊಳ್ಳಲಾರದೇ ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ಜನಕರಾಜ್, ಮಕ್ಕಳಿಗೆ ನೇಣು ಹಾಕಿ ತಾನು ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  

ಮೈಕೋ ಲೇಔಟ್ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ನಗರದ ಆಗ್ನೇಯ ವಿಭಾಗದ ಡಿಸಿಪಿ ಜೋಶಿ ಶ್ರೀನಾಥ್ ಮಹದೇವ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Last Updated : Nov 13, 2020, 4:07 PM IST

For All Latest Updates

TAGGED:

ABOUT THE AUTHOR

...view details