ಬೆಂಗಳೂರು:ನಗರದ ಆಗರ ಕೆರೆ ಸರ್ವಿಸ್ ರಸ್ತೆಯಲ್ಲಿ ಮಂಗಳೂರಿನಿಂದ ಬಂದ ಬಸ್ನಿಂದ ನಗರದ ವಿವಿಧ ಭಾಗಗಳಿಗೆ ಮಾದಕ ವಸ್ತುಗಳನ್ನು ಸರಬರಾಜು ಮಾಡಲು ಅಣಿಯಾಗಿದ್ದ ದಂಧೆಕೋರರನ್ನು ರೆಡ್ ಹ್ಯಾಂಡ್ ಆಗಿ ಹೆಚ್.ಎಸ್.ಆರ್. ಠಾಣೆಯ ಆರಕ್ಷಕ ಮುನಿ ರೆಡ್ಡಿ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ.
ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ರಾಜ್ಯ ಮತ್ತು ಅಂತಾರಾಜ್ಯ ಡ್ರಗ್ಸ್ ದಂಧೆಕೋರರಾದ ನಾಲ್ವರನ್ನು ಎಚ್‌ಎಸ್‌ಆರ್ ಲೇಔಟ್ ಪೊಲೀಸರು ಕಂಬಿ ಹಿಂದೆ ತಳ್ಳಿದ್ದಾರೆ.