ಕರ್ನಾಟಕ

karnataka

ETV Bharat / state

ಭ್ರಷ್ಟ ಪೊಲೀಸ್ ಹೆಡ್ ಕಾನ್ಸ್​ಟೇಬಲ್‌ಗೆ 4 ವರ್ಷ ಜೈಲು ಶಿಕ್ಷೆ

10 ಸಾವಿರ ಲಂಚ ಪಡೆದಿದ್ದ ಬಾಗಲಗುಂಟೆ ಪೊಲೀಸ್ ಠಾಣೆ ಹೆಡ್ ಕಾನ್ಸ್​ಟೇಬಲ್​ಗೆ ಕೋರ್ಟ್​ 4 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿದೆ.

4 years imprisonment for corruption police constable
4 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

By

Published : Sep 30, 2021, 3:20 PM IST

ಬೆಂಗಳೂರು:ಪ್ರಕರಣವೊಂದರ ತನಿಖೆಯ ವೇಳೆ ವಶಕ್ಕೆ ಪಡೆದಿದ್ದ ವಾಹನವನ್ನು ಬಿಡುಗಡೆ ಮಾಡಲು 10 ಸಾವಿರ ರೂ ಲಂಚ ಪಡೆದಿದ್ದ ಬಾಗಲಗುಂಟೆ ಪೊಲೀಸ್ ಠಾಣೆ ಹೆಡ್ ಕಾನ್ಸ್​ಟೇಬಲ್​ ಮಂಜಣ್ಣ ಎಂಬುವರಿಗೆ ನಗರದ ವಿಶೇಷ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿತು.

ಪ್ರಕರಣದಲ್ಲಿ ಬಂಧಿತನಾಗಿದ್ದ ವ್ಯಕ್ತಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದ ನಂತರ ಪೊಲೀಸರು ಜಪ್ತಿ ಮಾಡಿದ್ದ ಬೈಕ್ ಬಿಡುಗಡೆಗೆ ಕೋರಿದ್ದರು. ಈ ವೇಳೆ ಬೈಕ್ ಮೇಲುಸ್ತುವಾರಿವಹಿಸಿದ್ದ ಹೆಡ್ ಕಾನ್ಸ್​ಟೇಬಲ್​ ಮಂಜಣ್ಣ, ವಾಹನದ ಬಿಡುಗಡೆಗೆ 20 ಸಾವಿರ ರೂ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಬೈಕ್ ಮಾಲೀಕ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಿದ್ದರು.

ಎಸಿಬಿ ಪೊಲೀಸರು 2017ರ ಜುಲೈ 15ರಂದು ಕಾರ್ಯಾಚರಣೆ ನಡೆಸಿ ಮಂಜಣ್ಣ ಲಂಚ ಪಡೆಯುವ ವೇಳೆಯೇ ಬಂಧಿಸಿ, 2018ರಲ್ಲಿ ನ್ಯಾಯಾಲಯಕ್ಕೆ ಚಾರ್ಜ್​​ಶೀಟ್ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನಗರದ ವಿಶೇಷ ನ್ಯಾಯಾಲಯ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ 4 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.

ಇದನ್ನೂ ಓದಿ: ಡೆತ್​ನೋಟ್​ ಬರೆದಿಟ್ಟು ನಟಿ ಸೌಜನ್ಯ ಆತ್ಮಹತ್ಯೆ

ABOUT THE AUTHOR

...view details