ಬೆಂಗಳೂರು: 40 ಪರ್ಸೆಂಟ್ ಕಮಿಷನ್ ಬಿಜೆಪಿ ಸರ್ಕಾರವನ್ನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 40 ಸೀಟಿಗೆ ನಿಲ್ಲಿಸುವುದೇ ಕಾಂಗ್ರೆಸ್ ಪಕ್ಷದ ಗುರಿ ಎಂದು ಕಾಂಗ್ರೆಸ್ ಮುಖಂಡ ಬಿ. ಕೆ. ಹರಿಪ್ರಸಾದ್ ತಿಳಿಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿಯವರಿಗೆ ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ 60 ಸ್ಥಾನಗಳಿಗಿಂತ ಮೇಲೆ ಹೋಗೋದಿಲ್ಲ ಎಂಬುದು ಈಗಾಗಲೇ ಗೊತ್ತಾಗಿದೆ.
40 ಪರ್ಸೆಂಟ್ ಕಮಿಷನ್ ಸರ್ಕಾರವನ್ನು 40 ಸ್ಥಾನಗಳಿಗೆ ಸೀಮಿತಗೊಳಿಸಲು ನಾವು ಕಾಂಗ್ರೆಸ್ನವರು ತಂತ್ರ ಮಾಡಿದ್ದೇವೆ. ಈಗಾಗಲೇ ಬಿಜೆಪಿ ಪಕ್ಷದಿಂದ ಬೇಸತ್ತು ನಮ್ಮ ಪಕ್ಷಕ್ಕೆ ಹಲವು ನಾಯಕರು ಬಂದಿದ್ದಾರೆ, ಬರುತ್ತಾ ಇದ್ದಾರೆ. ಮುಂದೆಯೂ ಬರುವವರಿದ್ದಾರೆ. ಪುಟ್ಟಣ್ಣ ಅಂತಹವರೇ ಬಿಜೆಪಿಯನ್ನು ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಬಂದಿರೋದನ್ನು ನೋಡಿದರೆ ಬಿಜೆಪಿಯ ಸ್ಥಿತಿ ಏನು ಎಂಬುದು ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.
ಲಿಂಗಾಯತ ನಾಯಕರನ್ನು ಬಿಜೆಪಿ ಪಕ್ಷ ತೀರಾ ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ. ಯಡಿಯೂರಪ್ಪ ಅಂತಹ ನಾಯಕರನ್ನೇ ಮೂಲೆ ಗುಂಪು ಮಾಡಿ, ಮಾರ್ಗದರ್ಶನ ಮಂಡಳಿಯ ಮಾರ್ಗದಲ್ಲಿ ನಿಲ್ಲಿಸಿದ್ದಾರೆ. ವಿ. ಸೋಮಣ್ಣ ಅವರು ಲಿಂಗಾಯತ ನಾಯಕರ ಜೊತೆಗೆ ಬೇರೆ ಸಮುದಾಯದವರ ಜೊತೆಗೂ ಒಳ್ಳೆ ಸಂಬಂಧ ಇದೆ. ಬಿಜೆಪಿಯಿಂದ ಸೋಮಣ್ಣನವರೇ ಬೇಸತ್ತಿರುವುದು ನಿಜ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ನಂಬಿ ಯಾರು ಬೇಕಾದರೂ ಬರಬಹುದು ಎಂದರು.
ಇದನ್ನೂ ಓದಿ:ಶಾಸಕ ಮಾಡಾಳ್ ಪುತ್ರನ ವಿರುದ್ಧ ಮತ್ತೆರಡು ಎಫ್ಐಆರ್ ದಾಖಲಿಸಿದ ಲೋಕಾಯುಕ್ತ..!