ಬೆಂಗಳೂರು: ಗುತ್ತಿಗೆದಾರರು ಮೊದಲು ಪರ್ಸಂಟೇಜ್ ಕೊಡುವುದನ್ನು ನಿಲ್ಲಿಸಿದರೆ ಇಂಥ ಕಮಿಷನ್ ಪ್ರಕರಣಗಳು ನಿಲ್ಲುತ್ತವೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಕೊಡುವುದಿಲ್ಲ ಎಂಬ ನಿರ್ಧಾರ ಮಾಡಲಿ. ಮೊದಲು ಅವರು ಸರಿಯಾಗಿ ಕೆಲಸ ಮಾಡಿದರೆ ಕಮಿಷನ್ ವಿಚಾರವೇ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಗುತ್ತಿಗೆದಾರರು ಪರ್ಸಂಟೇಜ್ ಕೊಡುವುದು ನಿಲ್ಲಿಸಿ, ಎಲ್ಲವೂ ಸರಿ ಹೋಗುತ್ತದೆ: ಹೆಚ್‌ಡಿಕೆ
ಗುತ್ತಿಗೆದಾರರು ಪರ್ಸೆಂಟೇಜ್ ಕೊಡುವುದು ನಿಲ್ಲಿಸಿದರೆ ಎಲ್ಲವೂ ಸರಿಯಾಗುತ್ತದೆ. ಅವರ ಅಧ್ಯಕ್ಷರು ಈ ಬಗ್ಗೆ ಸರಿಯಾದ ನಿರ್ಧಾರ ತೆಗೆದುಕೊಳ್ಳಬೇಕಿದೆ.- ಹೆಚ್.ಡಿ.ಕುಮಾರಸ್ವಾಮಿ
ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಲಂಚಕ್ಕೆ ಬೇಡಿಕೆ ಇಟ್ಟ ಆರೋಪಕ್ಕೆ ಸಂಬಂಧಿಸಿ ಬೆಳಗಾವಿಯ ಗುತ್ತಿಗೆದಾರೊಬ್ಬರು ಪ್ರಧಾನಿ ಮೋದಿಗೆ ಪತ್ರ ಬರೆದಿರುವ ವಿಚಾರದ ಬಗ್ಗೆ ಮಾಧ್ಯಮ ಸಿಬ್ಬಂದಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಜ್ಯ ಸರ್ಕಾರ ಇತ್ತೀಚಿನ ದಿನಗಳಲ್ಲಿ ಹೆಚ್ಚು ಚರ್ಚೆಗೆ ಬಂದದ್ದೇ ಗುತ್ತಿಗೆ ವಿಚಾರದಲ್ಲಿ. ಇದು ಹೊಸ ವಿಷಯವಲ್ಲ. ಇದು ದಿನನಿತ್ಯದ ಕೆಲಸದಂತಾಗಿದೆ. ಮೊದಲು ಸಣ್ಣ ಪ್ರಮಾಣದಲ್ಲಿತ್ತು, ಈಗ ದೊಡ್ಡದಾಗಿದೆ ಎಂದು ಪ್ರತಿಕ್ರಿಯಿಸಿದರು.
ಇದನ್ನೂ ಓದಿ:ಜಿ.ಪಂ, ತಾ.ಪಂ. ಚುನಾವಣೆ : ಹಿಂದುಳಿದ ವರ್ಗದವರಿಗೆ ಅನ್ಯಾಯವಾಗಲು ಬಿಡಲ್ಲವೆಂದ ಸಚಿವ ಈಶ್ವರಪ್ಪ