ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಇಂದು ಬರೋಬ್ಬರಿ 4,225 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಅಲ್ಲದೇ 26 ಮಂದಿ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ.
ಬೆಂಗಳೂರು ನಗರದಲ್ಲೇ ಅತಿ ಹೆಚ್ಚು ಜನರಿಗೆ ಕೋವಿಡ್ ಸೋಂಕು ತಗುಲಿದೆ. 2,928 ಜನರಲ್ಲಿ ಕೊರೊನಾ ದೃಢಪಟ್ಟಿದ್ದು, 18 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಇಂದು 1,492 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 28,248ಕ್ಕೆ ತಲುಪಿದೆ. ಈವರೆಗೆ ಒಟ್ಟು 9,56,170 ಮಂದಿ ಚೇತರಿಸಿಕೊಂಡಿದ್ದಾರೆ.
ಇದನ್ನೂ ಓದಿ:ರಾಜ್ಯದಲ್ಲಿಂದು 2975 ಹೊಸ ಕೋವಿಡ್ ಪ್ರಕರಣ: ಮಹಾಮಾರಿಗೆ 21 ಮಂದಿ ಬಲಿ
ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 9,97,004ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆ 12,567ಕ್ಕೆ ತಲುಪಿದೆ. ಸದ್ಯ ಐಸಿಯುನಲ್ಲಿ 266 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಮೃತಪಡುತ್ತಿರುವವರ ಪ್ರಮಾಣವೂ 0.61% ಕ್ಕೆ ಏರಿಕೆಯಾಗಿದ್ದರೆ, ಸೋಂಕಿತರ ಪ್ರಮಾಣ 3.89 % ಕ್ಕೆ ತಲುಪಿದೆ. ಈವರೆಗೆ 37,20,850 ಮಂದಿ ಲಸಿಕೆ ಪಡೆದಿದ್ದಾರೆ.