ಬೆಂಗಳೂರು: ರಾಜ್ಯದಲ್ಲಿಂದು 426 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,40,596ಕ್ಕೆ ಏರಿಕೆ ಆಗಿದೆ.
ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,225 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇಂದು 433 ಮಂದಿ ಗುಣಮುಖರಾಗಿದ್ದು, ಇದುವರೆಗೆ ಒಟ್ಟು 9,22,437 ಮಂದಿ ಸೋಂಕು ಮುಕ್ತರಾಗಿದ್ದಾರೆ.