ಬೆಂಗಳೂರು: ರಾಜ್ಯದಲ್ಲಿಂದು 430 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, 7 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇಂದು 340 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಈವರೆಗೆ ಒಟ್ಟು 9,25,829 ಮಂದಿ ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 9,44,057ಕ್ಕೆ ಏರಿಕೆಯಾಗಿದ್ದು, 5,958 ಸಕ್ರಿಯ ಪ್ರಕರಣಗಳಿವೆ. 137 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.