ಬೆಂಗಳೂರು: ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಬೆಂಗಳೂರಿನ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಸಿ.ಎಂ ನಾಗರಾಜ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ದೇಶದ ಒಟ್ಟು 44 ಶಿಕ್ಷಕರಿಗೆ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಪ್ರಶಸ್ತಿ ಘೋಷಣೆ ಮಾಡಿದೆ.
ಬೆಂಗಳೂರಿನ ಶಿಕ್ಷಕ ಸಿ.ಎಂ. ನಾಗರಾಜ್ ಸೇರಿದಂತೆ ದೇಶದ 44 ಜನ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ
ದೇಶದ 44 ಶಿಕ್ಷಕರಿಗೆ ಈ ಪ್ರಶಸ್ತಿ ಲಭಿಸಿದ್ದು, ರಾಜ್ಯದ ಓರ್ವ ಶಿಕ್ಷಕ ಕೂಡ ಇದಕ್ಕೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಶಿಕ್ಷಕರಿಗೆ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆ ದಿನ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಬೆಂಗಳೂರಿನ ಶಿಕ್ಷಕ ಸಿ ಎಂ ನಾಗರಾಜ್ ಸೇರಿದಂತೆ ದೇಶದ 44 ಜನ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರಕಟ
ರಾಜಸ್ತಾನ, ಗುಜರಾತ್, ಬಿಹಾರ, ಓಡಿಶಾ, ಉತ್ತರ ಪ್ರದೇಶ, ಸಿಕ್ಕಿಂ , ಅಸ್ಸೋಂ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು,ಮಹಾರಾಷ್ಟ್ರ ರಾಜ್ಯದ ತಲಾ ಇಬ್ಬರು ಶಿಕ್ಷರಿಗೆ ಈ ಪ್ರಶಸ್ತಿ ಲಭಿಸಿದೆ. ರಾಜ್ಯದಿಂದ ಒಬ್ಬರಿಗೆ ಮಾತ್ರ ಕೇಂದ್ರ ಈ ಪ್ರಶಸ್ತಿ ಘೋಷಿಸಿದೆ. ಆಯ್ಕೆಯಾದ ಶಿಕ್ಷಕರಿಗೆ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಪ್ರಶಸ್ತಿ ಪುರಸ್ಕ್ರತ ಶಿಕ್ಷಕರ ಪಟ್ಟಿ ಇಂತಿದೆ.