ಬೆಂಗಳೂರು: ರಾಜ್ಯದಲ್ಲಿಂದು 468 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,38,401ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿಂದು 468 ಮಂದಿಗೆ ಕೊರೊನಾ ದೃಢ: ಇಬ್ಬರು ಸೋಂಕಿಗೆ ಬಲಿ - ಕೋವಿಡ್
ರಾಜ್ಯದಲ್ಲಿಂದು ಕೊರೊನಾ ಸೋಂಕಿಗೆ ಇಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಒಟ್ಟು 12,211ಕ್ಕೆ ಏರಿದೆ.
ಕೊರೊನಾ
ಇಬ್ಬರು ಕೋವಿಡ್ನಿಂದ ಮೃತರಾಗಿದ್ದು, ಸಾವಿನ ಸಂಖ್ಯೆ 12,211ಕ್ಕೆ ಏರಿದೆ. ಇನ್ನು 19 ಜನ ಸೋಂಕಿತರು ಅನ್ಯ ಕಾರಣಕ್ಕೆ ಮೃತರಾಗಿದ್ದಾರೆ. ಒಟ್ಟು 607 ಸೋಂಕಿತರು ಇಂದು ಗುಣಮುಖರಾಗಿದ್ದು, ಈವರೆಗೆ 9,20,110 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ತೀವ್ರ ನಿಗಾ ಘಟಕದಲ್ಲಿ 148 ಜನರು ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ರಾಜ್ಯದಲ್ಲಿ 6061 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಸೋಂಕಿನಿಂದ ಖಚಿತ ಪ್ರಕರಣಗಳ ಶೇಖಡವಾರು ಪ್ರಮಾಣ 0.68ರಷ್ಟು ಇದ್ದರೆ, ಮೃತಪಟ್ಟವರ ಶೇಕಡಾವಾರು ಪ್ರಮಾಣ 0.42ರಷ್ಟು ಇದೆ. ಯುಕೆಯಿಂದ 319 ಪ್ರಯಾಣಿಕರು ರಾಜ್ಯಕ್ಕೆ ಆಗಮಿಸಿದ್ದಾರೆ.