ಬೆಂಗಳೂರು:ರಾಜ್ಯದಲ್ಲಿ ಗುರುವಾರ 21,927 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 471 ಜನರಲ್ಲಿ ಸೋಂಕು ದೃಢಪಟ್ಟಿದೆ. 214 ಮಂದಿ ಡಿಸ್ಚಾರ್ಜ್ ಆಗಿದ್ದು, ಇಲ್ಲಿಯವರೆಗೆ ಒಟ್ಟು 39,11,796 ಮಂದಿ ಗುಣಮುಖರಾಗಿದ್ದಾರೆ.
ಇಂದು ಮೃತಪಟ್ಟ ಸೋಂಕಿತರ ಸಂಖ್ಯೆ ಶೂನ್ಯ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 2,880 ರಷ್ಟಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ. 2.14 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ.1.73 ರಷ್ಟಿದೆ. ವಾರದ ಸಾವಿನ ಪ್ರಮಾಣ ಶೇ. 0.04 ಇದೆ.