ಕರ್ನಾಟಕ

karnataka

ETV Bharat / state

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 480 ' ನಮ್ಮ ಕ್ಲಿನಿಕ್' ಆರಂಭ: ಡಾ.ಕೆ.ಸುಧಾಕರ್​ - about 480 namma clinic

ವಿಶ್ವ ಮಿದುಳು ದಿನ ಪ್ರಯುಕ್ತ ಡಾ.ಕೆ.ಸುಧಾಕರ್​, ರಾಜ್ಯದಲ್ಲಿ 480 'ನಮ್ಮ ಕ್ಲಿನಿಕ್​'ಗಳುನ್ನು ಆರಂಭಿಸಿ ಉಚಿತ ನೇತ್ರ ತಪಾಸಣೆ ಹಾಗೂ ಕಣ್ಣಿನ ಪರೆಯ ಶಸ್ತ್ರ ಚಿಕಿತ್ಸೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

dr.k.sudhakar
ಡಾ.ಕೆ.ಸುಧಾಕರ್​

By

Published : Jul 22, 2022, 4:30 PM IST

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 480 'ನಮ್ಮ ಕ್ಲಿನಿಕ್' ಆರಂಭಿಸಲಾಗುವುದು ಎಂದು ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ನಿಮ್ಹಾನ್ಸ್ ಮತ್ತು ಆರೋಗ್ಯ ಇಲಾಖೆ ಜಂಟಿಯಾಗಿ ಹಮ್ಮಿಕೊಂಡಿದ್ದ ವಿಶ್ವ ಮಿದುಳು ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರಿಗೆ ವಿಶೇಷ ಕ್ಲಿನಿಕ್ ಸ್ಥಾಪಿಸಲಾಗುವುದು ಎಂದು ಹೇಳಿದರು.

ಬೆಂಗಳೂರಿನಲ್ಲಿ 243 ವಾರ್ಡ್‍ಗಳಲ್ಲೂ ನಮ್ಮ ಕ್ಲಿನಿಕ್ ಪ್ರಾರಂಭಿಸಲಾಗುವುದು. ರಾಜ್ಯದ ಪ್ರತಿಯೊಬ್ಬರಿಗೂ ನೇತ್ರ ತಪಾಸಣೆ ಕೈಗೊಂಡು ಅಗತ್ಯವಿದ್ದರೆ ಉಚಿತ ಕನ್ನಡಕ ನೀಡಲಾಗುವುದು. ಕಣ್ಣಿನ ಪರೆಯ ಶಸ್ತ್ರ ಚಿಕಿತ್ಸೆ ಸಹ ಮಾಡಲಾಗುವುದು. ಆರೋಗ್ಯ ಸೇವೆಯನ್ನು ಸರ್ಕಾರ ಮೂಲ ಹಕ್ಕು ಎಂದು ಭಾವಿಸಿದ್ದು, ಶ್ರೇಷ್ಠ ಚಿಕಿತ್ಸೆ ಮತ್ತು ಸೌಲಭ್ಯಗಳನ್ನು ಒದಗಿಸುತ್ತಿದೆ ಎಂದು ತಿಳಿಸಿದರು.

ಇನ್ನು ರಾಜ್ಯದ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮ ಮೆಚ್ಚಿ ಕೇಂದ್ರ ಸರ್ಕಾರ ಇಡೀ ದೇಶಕ್ಕೆ ವಿಸ್ತರಣೆ ಮಾಡುವ ಘೋಷಣೆ ಮಾಡಿದೆ. ಕ್ರಿಕೆಟ್‍ಪಟು ರಾಬಿನ್ ಉತ್ತಪ್ಪ ಅವರು ಮಾನಸಿಕ ಆರೋಗ್ಯ ಕಾರ್ಯಕ್ರಮದ ರಾಯಭಾರಿಯಾಗಿದ್ದು, ಜಯನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೊದಲ ಬ್ರೈನ್ ಹೆಲ್ತ್ ಕ್ಲಿನಿಕ್‍ ಅನ್ನು ಉದ್ಘಾಟನೆ ಮಾಡಲಾಗಿದೆ ಎಂದರು.

ಖಾಸಗಿ ಆ್ಯಂಬುಲೆನ್ಸ್ ದರದ ಬಗ್ಗೆ ಚರ್ಚೆ :ಖಾಸಗಿ ಆ್ಯಂಬುಲೆನ್ಸ್​ಗಳ ದರ ಪರಿಷ್ಕರಣೆಯನ್ನು ಸಾರಿಗೆ ಇಲಾಖೆ ಮಾಡುತ್ತದೆ. ರೋಗಿ ಹಾಗೂ ಅವರ ಸಂಬಂಧಿಕರಿಗೆ ದುಬಾರಿ ದರ ವಿಧಿಸುತ್ತಿರುವ ಬಗ್ಗೆ ಸಾರಿಗೆ ಸಚಿವರೊಂದಿಗೆ ಚರ್ಚಿಸಲಾಗುವುದು. ಬೇಕಾಬಿಟ್ಟಿ ದರ ವಿಧಿಸುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದ ಅವರು, ಸರ್ಕಾರಿ ಆ್ಯಂಬುಲೆನ್ಸ್​​ಗಳ ಸೇವೆ ಉಚಿತವಾಗಿ ದೊರೆಯುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ:ಮೊದಲ ಬಾರಿಗೆ ನಗರಸಭೆ ಕಾರ್ಪೋರೇಟರ್​ ಆದ ತೃತೀಯ ಲಿಂಗಿ

ABOUT THE AUTHOR

...view details