ಬೆಂಗಳೂರು: ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಡಿಸಿಎಂ ಪರಮೇಶ್ವರ್ ಭರವಸೆ ನೀಡಿದ್ದಾರೆ.
ಬೆಂಗಳೂರು ಕಟ್ಟಡ ಕುಸಿತ ದುರಂತ: ಮೃತ ಕುಟುಂಬಸ್ಥರಿಗೆ ತಲಾ ₹5 ಲಕ್ಷ ರೂ. ಪರಿಹಾರ - undefined
ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ಸಂಭವಿಸಿದ ನಿರ್ಮಾಣ ಹಂತದ ಕಟ್ಟಡ ಕುಸಿತದಲ್ಲಿ ಸಾವಿಗೀಡಾದವರ ಕುಟುಂಬಸ್ಥರಿಗೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ. ಅದಲ್ಲದೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ 'ಈಟಿವಿ ಭಾರತ' ಪ್ರತಿನಿಧಿಯೊಂದಿಗೆ ಮಾತನಾಡಿದ ಪರಮೇಶ್ವರ್, ನಿರ್ಮಾಣ ಹಂತದ ಎರಡು ಕಟ್ಟಡಗಳು ಕುಸಿದಿವೆ. ಕೂಡಲೇ ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದರು. ಇನ್ನೂ ರಕ್ಷಣಾ ಕಾರ್ಯಾ ಮುಂದುವರಿದಿದೆ. ಕಟ್ಟಡ ನಿರ್ಮಾಣಕ್ಕೆ ಯಾವ ರೀತಿ ಮಟಿರಿಯಲ್ ಬಳಸಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನಿರ್ಮಾಣವಾಗಿರುವ ಕಟ್ಟಡ ಗುರುತಿಸಿ ತೆರವಿಗೆ ಆದೇಶಿಸಿದ್ದೇನೆ ಎಂದರು.
ಸೈಟ್ 39 ಮತ್ತು 40 ರಲ್ಲಿ ನಿರ್ಮಿಸಲಾಗುತ್ತಿದ್ದ ಕಟ್ಟಡಗಳು ಕುಸಿದು ಒಟ್ಟು ಐದು ಮಂದಿ ಸಾವನ್ನಪ್ಪಿದ್ದಾರೆ. ಇಂದು ನಸುಕಿನಜಾವ 2.15 ಕ್ಕೆ ಕಟ್ಟಡ ಕುಸಿದ ಪರಿಣಾಮ ಒಟ್ಟು ಐದು ಜನ ಸಾವನ್ನಪ್ಪಿದ್ದರೆ, ಕೆಲವರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಎನ್ಡಿಆರ್ಎಫ್ ಮತ್ತು ಅಗ್ನಿಶಾಮಕ ದಳ ಕಾರ್ಯಾಚರಣೆ ಮುಂದುವರಿಸಿದ್ದಾರೆ.