ಬೆಂಗಳೂರು :ರಾಜ್ಯದಲ್ಲಿಂದು 10,843 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಅದರಲ್ಲಿ 50 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,45,660ಕ್ಕೆ ಏರಿಕೆ ಆಗಿದೆ. ಪಾಸಿಟಿವ್ ದರವೂ 0.46% ರಷ್ಟಿದೆ. ಇತ್ತ 51 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 39,04,049 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಕೂಡಾ ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ. 40,054 ಸೋಂಕಿಗೆ ಬಲಿಯಾಗಿದ್ದಾರೆ. 1,515 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ 49 ಜನರಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 17,81,768ಕ್ಕೆ ಏರಿಕೆ ಆಗಿದೆ. 48 ಮಂದಿ ಗುಣಮುಖರಾಗಿದ್ದು, ಈವರೆಗೆ 17,63,408 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಯಾವುದೇ ಸಾವಿನ ವರದಿಯಾಗಿಲ್ಲ. ಸದ್ಯ ಸಾವಿನ ಸಂಖ್ಯೆ 16,960 ರಷ್ಟಿದ್ದು, 1,399 ಸಕ್ರಿಯ ಪ್ರಕರಣಗಳಿವೆ. ವಿಮಾನ ನಿಲ್ದಾಣದಿಂದ 3317 ಪ್ರಯಾಣಿಕರು ಆಗಮಿಸಿದ್ದಾರೆ.
ರೂಪಾಂತರಿ ವೈರಸ್ ಅಪ್ಡೇಟ್ಸ್ :
ಅಲ್ಪಾ- 156
ಬೀಟಾ-08
ಡೆಲ್ಟಾ ಸಬ್ ಲೈನೇಜ್- 4,620