ಬೆಂಗಳೂರು: ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮೊ ಕೋರ್ಸ್‌ಗಳ ಮಧ್ಯಂತರ ಸೆಮಿಸ್ಟರ್‌ಗಳ ಪರೀಕ್ಷೆಗಳನ್ನು ಕೋವಿಡ್-19 ಕಾರಣಕ್ಕೆ ರದ್ದು ಮಾಡಿರುವುದರಿಂದ ಮುಂದಿನ ಸೆಮಿಸ್ಟರ್‌ಗಳ ಪರೀಕ್ಷಾ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ, ಉಪಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥ್ ನಾರಾಯಣ ಅವರು ತಿಳಿಸಿದರು.
ಪರೀಕ್ಷಾ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ.. ಡಿಸಿಎಂ ಡಾ. ಸಿ ಎನ್ ಅಶ್ವತ್ಥ್ ನಾರಾಯಣ - DCM ashwattanarayana latest news
ಈ ಸಂಬಂಧ ಸುತ್ತೋಲೆಯನ್ನು ಎಲ್ಲಾ ವಿಶ್ವವಿದ್ಯಾಲಯಗಳಿಗೆ ಕಳುಹಿಸಲು ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ ಅವರಿಗೆ ಸೂಚಿಸಿದರು. ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಪರೀಕ್ಷಾ ಶುಲ್ಕ ಸಂಗ್ರಹಿಸಿದ್ದು, ಅದನ್ನು ವಾಪಸ್ ಕೊಡಿಸಿ ಎನ್ನುವ ಮನವಿ ವಿದ್ಯಾರ್ಥಿಗಳಿಂದ ಬಂದಿತ್ತು..
DCM ashwattanarayana
ಈ ಸಂಬಂಧ ಸುತ್ತೋಲೆಯನ್ನು ಎಲ್ಲಾ ವಿಶ್ವವಿದ್ಯಾಲಯಗಳಿಗೆ ಕಳುಹಿಸಲು ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ ಅವರಿಗೆ ಸೂಚಿಸಿದರು. ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಪರೀಕ್ಷಾ ಶುಲ್ಕ ಸಂಗ್ರಹಿಸಿದ್ದು, ಅದನ್ನು ವಾಪಸ್ ಕೊಡಿಸಿ ಎನ್ನುವ ಮನವಿ ವಿದ್ಯಾರ್ಥಿಗಳಿಂದ ಬಂದಿತ್ತು.
ಇದಕ್ಕೆ ಸ್ಪಂದಿಸಿದ ಡಿಸಿಎಂ, ಪರೀಕ್ಷೆ ರದ್ದಾಗಿದ್ದರೂ ಮೌಲ್ಯಮಾಪನ ಪ್ರಕ್ರಿಯೆ ಇರುತ್ತದೆ. ಹೀಗಾಗಿ ಮುಂದಿನ ಸೆಮಿಸ್ಟರ್‌ಗಳ ಪರೀಕ್ಷಾ ಶುಲ್ಕದಲ್ಲಿ ಶೇ. 50ರಷ್ಟು ರಿಯಾಯಿತಿ ನೀಡಲು ಸೂಚಿಸಲಾಗುವುದು ಎಂದು ಅವರು ತಿಳಿಸಿದರು.