ಕರ್ನಾಟಕ

karnataka

ETV Bharat / state

ಕಬ್ಬು ಬೆಳೆಗಾರರ ಹೋರಾಟ ತೀವ್ರ: ಎಫ್‌ಆರ್‌ಪಿಗಿಂತ ಹೆಚ್ಚುವರಿಯಾಗಿ ಪ್ರತಿ ಟನ್‌ಗೆ 50 ರೂ. ನೀಡಲು ಆದೇಶ

ಎಥೆನಾಲ್ ಉತ್ಪಾದಿಸುವ ಕಾರ್ಖಾನೆಗಳು ಎಫ್‌ಆರ್‌ಪಿಗಿಂತ ಹೆಚ್ಚುವರಿಯಾಗಿ ಪ್ರತಿ ಟನ್‌ಗೆ 50 ರೂ. ಪಾವತಿಸುವಂತೆ ಕಬ್ಬು ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.

By

Published : Dec 8, 2022, 6:40 AM IST

50 rupee ton in addition to FRP for sugarcane
ಎಫ್‌ಆರ್‌ಪಿಗಿಂತ ಹೆಚ್ಚುವರಿಯಾಗಿ ಪ್ರತಿ ಟನ್‌ಗೆ 50 ರೂ ಪಾವತಿಸುವಂತೆ ಕಬ್ಬು ನಿಯಂತ್ರಣ ಮಂಡಳಿ ಆದೇಶ

ಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡ ಬೆನ್ನಲ್ಲೇ ಎಥೆನಾಲ್ ಉತ್ಪಾದಿಸುವ ಕಾರ್ಖಾನೆಗಳು ಎಫ್‌ಆರ್‌ಪಿಗಿಂತ ಹೆಚ್ಚುವರಿಯಾಗಿ ಪ್ರತಿ ಟನ್‌ಗೆ 50 ರೂ. ಪಾವತಿಸುವಂತೆ ಕಬ್ಬು ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ.

ಕಬ್ಬಿಗೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಪ್ರತಿ ಟನ್‌ಗೆ 3,050 ರೂ.ಇದೆ. ಆದರೆ ಕಾರ್ಖಾನೆಗಳು ಉಪ ಉತ್ಪನ್ನಗಳಿಂದ ಹೆಚ್ಚು ಲಾಭ ಮಾಡುತ್ತಿದ್ದು, ಈ ಲಾಭಾಂಶದಲ್ಲಿ ರೈತರಿಗೆ ಪಾಲು ನೀಡುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಎಥೆನಾಲ್ ಉತ್ಪಾದಿಸುವ ಕಾರ್ಖಾನೆಗಳು ಹೆಚ್ಚುವರಿಯಾಗಿ ಪ್ರತಿ ಟನ್‌ಗೆ 50 ರೂ. ಪಾವತಿಸುವಂತೆ ಆದೇಶ ಹೊರಡಿಸಲಾಗಿದೆ.

ಎಫ್‌ಆರ್‌ಪಿ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಗರದ ಫ್ರೀಡಂ ಪಾರ್ಕ್​ನಲ್ಲಿ ಕಳೆದ ಹದಿನೈದು ದಿನದಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಮಂಡಳಿ, ಸದ್ಯಕ್ಕೆ ಎಥೆನಾಲ್ ಉತ್ಪಾದಿಸುವ ಕಾರ್ಖಾನೆಗಳು ಎಫ್‌ಆರ್‌ಪಿ ಜೊತೆಗೆ ಟನ್‌ಗೆ 50 ರೂ. ಹೆಚ್ಚುವರಿಯಾಗಿ ಪಾವತಿಸಬೇಕು. ಕಬ್ಬು ನುರಿಯುವ ಹಂಗಾಮು ಮುಗಿದ ಬಳಿಕ ಸಕ್ಕರೆ, ಎಥೆನಾಲ್ ಮತ್ತು ಇತರೆ ಉಪ ಉತ್ಪನ್ನಗಳ ಮಾರಾಟದಿಂದ ಕಾರ್ಖಾನೆಗಳಿಗೆ ಬರುವ ಆದಾಯವನ್ನು ಪರಿಗಣಿಸಿ ಅಂತಿಮವಾಗಿ ಕಬ್ಬಿನ ದರ ನಿರ್ಧರಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

ಎಫ್‌ಆರ್‌ಪಿಗಿಂತ ಹೆಚ್ಚುವರಿಯಾಗಿ ಪ್ರತಿ ಟನ್‌ಗೆ 50 ರೂ ಪಾವತಿಸುವಂತೆ ಕಬ್ಬು ನಿಯಂತ್ರಣ ಮಂಡಳಿ ಆದೇಶ

ರಾಜ್ಯ ಸರ್ಕಾರ ಎಫ್‌ಆರ್‌ಪಿ ಜೊತೆಗೆ ಹೆಚ್ಚುವರಿ ದರ ಘೋಷಿಸಬೇಕು. ಪಂಜಾಬ್‌ನಲ್ಲಿ ಪ್ರತಿ ಟನ್‌ಗೆ 3,800 ರೂ., ಉತ್ತರ ಪ್ರದೇಶದಲ್ಲಿ 3,500 ರೂ., ಗುಜರಾತ್‌ನಲ್ಲಿ 4,400 ರೂ. ನಿಗದಿ ಮಾಡಲಾಗಿದೆ. ರಸಗೊಬ್ಬರ, ಕಟಾವು ಕೂಲಿ, ಸಾಗಾಣಿಕೆ ವೆಚ್ಚ ಹೆಚ್ಚಾಗಿರುವುದರಿಂದ ಕಬ್ಬಿನ ದರ ಪರಿಷ್ಕರಿಸುವಂತೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಗಾಗಿ, ಆದಾಯದ ಲೆಕ್ಕಾಚಾರ ಮಾಡಲು ನವೆಂಬರ್ 9 ರಂದು ತಾಂತ್ರಿಕ ಸಮಿತಿ ರಚಿಸಲಾಗಿತ್ತು. ಸಮಿತಿ ನೀಡಿದ ವರದಿ ಆಧರಿಸಿ ಈ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ:9ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ..

ABOUT THE AUTHOR

...view details